ಕರಾವಳಿ

ಉಡುಪಿ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಯತ್ನಕ್ಕೆ ರಾಹುಲ್ ಗಾಂಧಿ ಪ್ರಚೋದನೆ: ಕೆ.ಎಸ್. ನವೀನ್ ಆರೋಪ

ಸಂವಿಧಾನವನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ ನೀಡುತ್ತಿದ್ದಾರೆ. ದೇಶದ ಇತಿಹಾಸದಲ್ಲೇ ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆದಿರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ವಕ್ತಾರ ಕೆ.ಎಸ್. ನವೀನ್ ಆರೋಪಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ ಎಂದು ಕಾಂಗ್ರೆಸ್ ಸರ್ಕಾರದ ಸಚಿವರೇ ಒಪ್ಪಿಕೊಂಡಿದ್ದಾರೆ. ಆದರೂ ರಾಹುಲ್ ಗಾಂಧಿ ಯಾವುದೇ ದಾಖಲೆಗಳಿಲ್ಲದೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಚುನಾವಣಾ ಆಯೋಗದ ಘನತೆ ಹಾಗೂ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ರಾಹುಲ್ ಗಾಂಧಿ ನಡೆದುಕೊಳ್ಳುತ್ತಿದ್ದಾರೆ ಎಂದು ಕೆ.ಎಸ್. ನವೀನ್ ಟೀಕಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿರುವುದು ಖಂಡನೀಯ: ಸುನಿಲ್ ಕುಮಾರ್

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ…

14 hours ago

ದಕ್ಷಿಣ ಕನ್ನಡ: ಮಿಜಾರ್‌ನಲ್ಲಿ ಅಭಿಮಾನಿ ಬಸ್–ಸ್ಕೂಟರ್ ನಡುವೆ ಭೀಕರ ಅಪಘಾತ; ಸವಾರ ಗಂಭೀರ

ಮೂಡಬಿದಿರೆ ತಾಲೂಕಿನ ಮಿಜಾರ್‌ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್‌ನಲ್ಲಿ ಬಂದ…

14 hours ago

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ

ಶಾಲಾ ಶಿಕ್ಷಣ ಇಲಾಖೆ ಹಾಗೂ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ಬಂಟ್ವಾಳ ತಾಲೂಕು…

14 hours ago

ಬಂಟ್ವಾಳ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸಹಸವಾರ ಸಾವು

ಮೋಟಾರ್‌ಸೈಕಲ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 30ರಂದು…

14 hours ago

ಮಂಗಳೂರು: ಮಂಗಳೂರಿನ ಕೊಟ್ಟಾರ ಇನ್ಫೋಸಿಸ್ ಕ್ಯಾಂಪಸ್ ಮಾರಾಟ: ಮುಕುಂದ್ ಎಂ.ಜಿ.ಎಂ. ರಿಯಾಲಿಟಿ ಖರೀದಿ

ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಇನ್ಫೋಸಿಸ್ ಸಂಸ್ಥೆಯ ಕೊಟ್ಟಾರದಲ್ಲಿರುವ ಕ್ಯಾಂಪಸ್ ಮಾರಾಟವಾಗಿದೆ. ಅಕ್ಟೋಬರ್ 23ರಂದು…

18 hours ago

ಮಂಗಳೂರು: ಮಂಗಳೂರಿನಲ್ಲಿ ಪುಣೆ ಗ್ಯಾಸ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭ…!

ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶಗಳ ಅನಿಲ ವ್ಯವಸ್ಥೆ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪುಣೆ ಗ್ಯಾಸ್ ಸಂಸ್ಥೆಯು ಮಂಗಳೂರಿನಲ್ಲಿ ತನ್ನ ನೂತನ…

18 hours ago