ಗೋಕರ್ಣದ ತದಡಿ ಬಂದರಿನಲ್ಲಿ ಮೀನಿನ ವಿಷಾನಿಲಕ್ಕೆ ಸಿಲುಕಿ ಮೂವರು ಮೀನುಗಾರರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.
ಕಾರವಾರ ತಾಲೂಕಿನ ಮುದಗಾ ಮೀನುಗಾರಿಕಾ ಬಂದರಿನಲ್ಲಿ ಬೋಟ್ನ ಕೋಲ್ಡ್ ಸ್ಟೋರೇಜ್ ಸ್ವಚ್ಛಗೊಳಿಸುವ ವೇಳೆ ವಿಷಾನಿಲ ಸೋರಿಕೆಯಾಗಿ ಒಡಿಶಾ ಮೂಲದ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. ಮತ್ತೊಬ್ಬ ಮೀನುಗಾರ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ.
ಬೇಲೆಕೇರಿ ಮೂಲದ ‘ಮೂಕಾಂಬಿಕಾ’ ಬೋಟ್ನಲ್ಲಿ ಈ ಘಟನೆ ನಡೆದಿದೆ. ಚಮನ್ ಜಾತಿಯ ಮೀನುಗಳನ್ನು ಹಿಡಿದು ಬಂದರಿಗೆ ಮರಳಿದ್ದ ಮೀನುಗಾರರು, ಬೋಟ್ನ ಶೇಖರಣಾ ಘಟಕದಿಂದ ಮೀನುಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಘಟಕದಿಂದ ಹೊರಹೊಮ್ಮಿದ ವಿಷಾನಿಲಕ್ಕೆ ಸಿಲುಕಿ ಒಡಿಶಾ ಮೂಲದ ಪುರಂದರ ಬಿಸರಾ (21) ಮತ್ತು ಆಕಾಶ ನಾಯ್ಕ (24) ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಅಸ್ವಸ್ಥಗೊಂಡ ಲಾಲಿಂದರ ಧ್ರುವ (41) ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಮೂರು ದಿನಗಳ ಹಿಂದಷ್ಟೇ ಕುಮಟಾ ತಾಲೂಕಿನ ತದಡಿ ಬಂದರಿನಲ್ಲಿ ಚಮನ್ ಮೀನಿನ ವಿಷಾನಿಲಕ್ಕೆ ಸಿಲುಕಿ ಮೂವರು ಮೀನುಗಾರರು ಮೃತಪಟ್ಟಿದ್ದರು. ಇದೀಗ ಮುದಗಾ ಬಂದರಿನಲ್ಲಿಯೂ ಇದೇ ರೀತಿಯ ದುರಂತ ಸಂಭವಿಸಿರುವುದು ಮೀನುಗಾರಿಕಾ ವಲಯದಲ್ಲಿ ಆತಂಕ ಮೂಡಿಸಿದೆ. ಬೋಟ್ಗಳ ಶೇಖರಣಾ ಘಟಕಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವನ್ನು ಈ ಸರಣಿ ಅವಘಡಗಳು ಮತ್ತೊಮ್ಮೆ ಎತ್ತಿ ತೋರಿಸಿವೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ…
ಮೂಡಬಿದಿರೆ ತಾಲೂಕಿನ ಮಿಜಾರ್ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್ನಲ್ಲಿ ಬಂದ…
ಶಾಲಾ ಶಿಕ್ಷಣ ಇಲಾಖೆ ಹಾಗೂ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ಬಂಟ್ವಾಳ ತಾಲೂಕು…
ಮೋಟಾರ್ಸೈಕಲ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 30ರಂದು…
ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಇನ್ಫೋಸಿಸ್ ಸಂಸ್ಥೆಯ ಕೊಟ್ಟಾರದಲ್ಲಿರುವ ಕ್ಯಾಂಪಸ್ ಮಾರಾಟವಾಗಿದೆ. ಅಕ್ಟೋಬರ್ 23ರಂದು…
ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶಗಳ ಅನಿಲ ವ್ಯವಸ್ಥೆ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪುಣೆ ಗ್ಯಾಸ್ ಸಂಸ್ಥೆಯು ಮಂಗಳೂರಿನಲ್ಲಿ ತನ್ನ ನೂತನ…