ಮೂಡಬಿದಿರೆ ತಾಲೂಕಿನ ಮಿಜಾರ್ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ರಾಂಗ್ ಸೈಡ್ನಲ್ಲಿ ಬಂದ ಬಸ್ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಇರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಅಪಘಾತದ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



