ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿ, ಬಳಿಕ ಕೈಬಿಟ್ಟು ಮತ್ತೊಬ್ಬರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ತೀವ್ರ ಖಂಡನೀಯ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈದ್ಯಕೀಯ ಕ್ಷೇತ್ರದ ಜತೆಗೆ ಹಲವು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಡಾ. ಚಂದ್ರಶೇಖರ್ ಅವರು ಸದಾ ಜನರ ಧ್ವನಿಯಾಗಿ, ಸಮಾಜದ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ. ಇಂತಹ ಗೌರವಾನ್ವಿತ ವ್ಯಕ್ತಿತ್ವದ ಸೇವೆಯನ್ನು ಕಡೆಗಣಿಸಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಈ ನಡೆ ಡಾ. ಚಂದ್ರಶೇಖರ್ ಅವರಂತಹ ಸೇವಾನಿರತ ವ್ಯಕ್ತಿತ್ವಕ್ಕೆ ಮಾಡಿದ ಅಪಮಾನವಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುವುದಾಗಿ ತಿಳಿಸಿರುವ ಸುನಿಲ್ ಕುಮಾರ್, ಘಟನೆಯನ್ನು ಉಗ್ರವಾಗಿ ಖಂಡಿಸಿದ್ದಾರೆ.
ಮೂಡಬಿದಿರೆ ತಾಲೂಕಿನ ಮಿಜಾರ್ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್ನಲ್ಲಿ ಬಂದ…
ಶಾಲಾ ಶಿಕ್ಷಣ ಇಲಾಖೆ ಹಾಗೂ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ಬಂಟ್ವಾಳ ತಾಲೂಕು…
ಮೋಟಾರ್ಸೈಕಲ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 30ರಂದು…
ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಇನ್ಫೋಸಿಸ್ ಸಂಸ್ಥೆಯ ಕೊಟ್ಟಾರದಲ್ಲಿರುವ ಕ್ಯಾಂಪಸ್ ಮಾರಾಟವಾಗಿದೆ. ಅಕ್ಟೋಬರ್ 23ರಂದು…
ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶಗಳ ಅನಿಲ ವ್ಯವಸ್ಥೆ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪುಣೆ ಗ್ಯಾಸ್ ಸಂಸ್ಥೆಯು ಮಂಗಳೂರಿನಲ್ಲಿ ತನ್ನ ನೂತನ…
ಕರ್ನಾಟಕ ಸರ್ಕಾರ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾಧಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾಧ್ಯಮ…