ಹಳೆಯಂಗಡಿ: ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ ಕಳೆದ 9 ದಿನಗಳಿಂದ ನಾಪತ್ತೆಯಾದ ವ್ಯಕ್ತಿ ಪಾವಂಜೆ ಬಳಯ ರಾಷ್ಟ್ರೀಯ ಹೆದ್ದಾರಿ 66 ಪಕ್ಕದ ಪಾಳುಬಿದ್ದ ಮನೆಯಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಗ್ರಾಮದ ಪಾವಂಜೆ ಕದ್ರಾತೋಟ ನಿವಾಸಿ ದೇವದಾಸ್ ಕುಲಾಲ್ (52) ಎಂದು ತಿಳಿದು ಬಂದಿದೆ. ಕಳೆದ ಜುಲೈ 25ರಂದು ಕದ್ರಾ ತೋಟದ ತನ್ನ ಮನೆಯಿಂದ ಕೆಲಸಕ್ಕೆಂದು ಹೋದವರು ನಿಗೂಢವಾಗಿ ನಾಪತ್ತೆಯಾಗಿದ್ದು, ಗುರುವಾರ ಪಾವಂಜೆ ಪರಿಸರದಲ್ಲಿ ದುರ್ವಾಸನೆ ಬರುತ್ತಿರುವುದನ್ನು ಕಂಡು ಸ್ಥಳೀಯರು ಅನುಮಾನಾಸ್ಪದವಾಗಿ ಹುಡುಕಾಡಿದಾಗ ಪಾಳು ಬಿದ್ದ ಮನೆಯೊಳಗೆ ತೀರಾ ಕೊಳೆತ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ.
ಶವ ಪತ್ತೆಯಾದ ಸ್ಥಳದಲ್ಲಿ ಕೀಟನಾಶಕ ಪ್ಯಾಕೆಟ್ ಮತ್ತು ಎರಡು ಪ್ಲಾಸ್ಟಿಕ್ ಬಾಟಲಿಗಳು ಪತ್ತೆಯಾಗಿದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೃತ ಪತ್ನಿ ಮತ್ತು ಸಂಬಂಧಿಕರು ದೇವದಾಸ್ ಅವರ ಅಂಗಿ, ಪ್ಯಾಂಟ್ ನಿಂದ ಶವ ಗುರುತಿಸಲಾಗಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸಾಮಾಜಿಕ ಕಾರ್ಯಕರ್ತರಾದ ಆಪತ್ಬಾಂಧವ ಆಸಿಫ್ ಹಾಗು ಅದ್ದಿ ಬೊಳ್ಳೂರು ಇವರುಗಳ ಸಹಾಯದಿಂದ ಮೃತ ಶರೀರವನ್ನು ಎತ್ತಿ ಆಂಬುಲೆನ್ಸ್ ಮುಖಾಂತರ ಮುಲ್ಕಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಯಿತು. ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆ ಎಂದು ತಿಳಿದು ಬಂದಿದ್ದು ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…