ಹಳೆಯಂಗಡಿ: ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ ಕಳೆದ 9 ದಿನಗಳಿಂದ ನಾಪತ್ತೆಯಾದ ವ್ಯಕ್ತಿ ಪಾವಂಜೆ ಬಳಯ ರಾಷ್ಟ್ರೀಯ ಹೆದ್ದಾರಿ 66 ಪಕ್ಕದ ಪಾಳುಬಿದ್ದ ಮನೆಯಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಗ್ರಾಮದ ಪಾವಂಜೆ ಕದ್ರಾತೋಟ ನಿವಾಸಿ ದೇವದಾಸ್ ಕುಲಾಲ್ (52) ಎಂದು ತಿಳಿದು ಬಂದಿದೆ. ಕಳೆದ ಜುಲೈ 25ರಂದು ಕದ್ರಾ ತೋಟದ ತನ್ನ ಮನೆಯಿಂದ ಕೆಲಸಕ್ಕೆಂದು ಹೋದವರು ನಿಗೂಢವಾಗಿ ನಾಪತ್ತೆಯಾಗಿದ್ದು, ಗುರುವಾರ ಪಾವಂಜೆ ಪರಿಸರದಲ್ಲಿ ದುರ್ವಾಸನೆ ಬರುತ್ತಿರುವುದನ್ನು ಕಂಡು ಸ್ಥಳೀಯರು ಅನುಮಾನಾಸ್ಪದವಾಗಿ ಹುಡುಕಾಡಿದಾಗ ಪಾಳು ಬಿದ್ದ ಮನೆಯೊಳಗೆ ತೀರಾ ಕೊಳೆತ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ.
ಶವ ಪತ್ತೆಯಾದ ಸ್ಥಳದಲ್ಲಿ ಕೀಟನಾಶಕ ಪ್ಯಾಕೆಟ್ ಮತ್ತು ಎರಡು ಪ್ಲಾಸ್ಟಿಕ್ ಬಾಟಲಿಗಳು ಪತ್ತೆಯಾಗಿದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೃತ ಪತ್ನಿ ಮತ್ತು ಸಂಬಂಧಿಕರು ದೇವದಾಸ್ ಅವರ ಅಂಗಿ, ಪ್ಯಾಂಟ್ ನಿಂದ ಶವ ಗುರುತಿಸಲಾಗಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸಾಮಾಜಿಕ ಕಾರ್ಯಕರ್ತರಾದ ಆಪತ್ಬಾಂಧವ ಆಸಿಫ್ ಹಾಗು ಅದ್ದಿ ಬೊಳ್ಳೂರು ಇವರುಗಳ ಸಹಾಯದಿಂದ ಮೃತ ಶರೀರವನ್ನು ಎತ್ತಿ ಆಂಬುಲೆನ್ಸ್ ಮುಖಾಂತರ ಮುಲ್ಕಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಯಿತು. ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆ ಎಂದು ತಿಳಿದು ಬಂದಿದ್ದು ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…