ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಕಡೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶಾರದ ಮಂಟಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಕಮಲಾಕ್ಷ ಆಚಾರ್ಯ ಎಂದು ಗುರುತಿಸಲಾಗಿದೆ. ಅಕ್ಟೋಬರ್ 31ರಂದು ರಾತ್ರಿ ಸುಮಾರು 9 ಗಂಟೆಗೆ ಕಮಲಾಕ್ಷ ಆಚಾರ್ಯ ಅವರು ಮಡಂತ್ಯಾರಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು.

ಈ ವೇಳೆ ಅದೇ ರಸ್ತೆಯಲ್ಲಿ ಮುಂಭಾಗದಲ್ಲಿ ಸಾಗುತ್ತಿದ್ದ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ಮತ್ತೊಂದು ಬೈಕ್ ಸವಾರನ ನಿಯಂತ್ರಣ ತಪ್ಪಿ, ಎದುರಿನಿಂದ ಬರುತ್ತಿದ್ದ ಕಮಲಾಕ್ಷ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಕಮಲಾಕ್ಷ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 1ರ ಬೆಳಗಿನ ಜಾವ 2.16ಕ್ಕೆ ಮೃತಪಟ್ಟಿದ್ದಾರೆ.

ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ನಾಗೇಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಸಾಮಾಜಿಕ ಸೇವೆ ಗುರುತಿಸಿ ಐಕಳ ಹರೀಶ್ ಶೆಟ್ಟಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವ

ಮಂಗಳೂರು: ಮೀನು ಸಂರಕ್ಷಣೆಗೆ ಬಳಸುವ ಮಂಜುಗಡ್ಡೆ ತಯಾರಿಕಾ ಘಟಕಗಳಿಗೆ ಆಹಾರ ಸುರಕ್ಷತಾ ಅಧಿಕಾರಿಗಳ ಭೇಟಿ

ಮಂಗಳೂರು: ಲಕ್ಷಾಂತರ ಬಾಂಗ್ಲಾದೇಶಿಗರಿದ್ದಾರೆ ಎಂದವರು ಈಗ ಎಲ್ಲಿದ್ದಾರೆ ತೋರಿಸಿ: ಪ್ರಕಾಶ್ ರಾಜ್ ಸವಾಲು

ಮಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ತಪ್ಪಿಸಲು ಮುನ್ನೆಚ್ಚರಿಕೆ ವಹಿಸಿ: ಯು.ಟಿ. ಖಾದರ್ ಸೂಚನೆ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿರುವುದು ಖಂಡನೀಯ: ಸುನಿಲ್ ಕುಮಾರ್

ದಕ್ಷಿಣ ಕನ್ನಡ: ಮಿಜಾರ್‌ನಲ್ಲಿ ಅಭಿಮಾನಿ ಬಸ್–ಸ್ಕೂಟರ್ ನಡುವೆ ಭೀಕರ ಅಪಘಾತ; ಸವಾರ ಗಂಭೀರ

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸಹಸವಾರ ಸಾವು

ಮಂಗಳೂರು: ಮಂಗಳೂರಿನ ಕೊಟ್ಟಾರ ಇನ್ಫೋಸಿಸ್ ಕ್ಯಾಂಪಸ್ ಮಾರಾಟ: ಮುಕುಂದ್ ಎಂ.ಜಿ.ಎಂ. ರಿಯಾಲಿಟಿ ಖರೀದಿ

error: Content is protected !!