ಕರಾವಳಿ

ಮಂಗಳೂರು: ಲಕ್ಷಾಂತರ ಬಾಂಗ್ಲಾದೇಶಿಗರಿದ್ದಾರೆ ಎಂದವರು ಈಗ ಎಲ್ಲಿದ್ದಾರೆ ತೋರಿಸಿ: ಪ್ರಕಾಶ್ ರಾಜ್ ಸವಾಲು

ಕರ್ನಾಟಕದಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ ನಾಯಕರಿಗೆ ಹಿರಿಯ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಸವಾಲು ಹಾಕಿದ್ದಾರೆ. ಲಕ್ಷಾಂತರ ನುಸುಳುಕೋರರು ಎಲ್ಲಿದ್ದಾರೆ ಎಂದು ತೋರಿಸುವಂತೆ ಅವರು ಪ್ರಶ್ನಿಸಿದ್ದಾರೆ.

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧೆಡೆ ಲಕ್ಷಾಂತರ ಬಾಂಗ್ಲಾದೇಶಿಗರು ಹಾಗೂ ಪಾಕಿಸ್ತಾನಿಯರು ಅಕ್ರಮವಾಗಿ ನುಸುಳಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿ ಜನರಲ್ಲಿ ಭೀತಿ ಮೂಡಿಸಿದ್ದರು. ಆದರೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಅಂತಿಮ ವರದಿಯಲ್ಲಿ ಪತ್ತೆಯಾಗಿದ್ದು ಕೇವಲ ಇಬ್ಬರು ಮಹಿಳೆಯರು ಮಾತ್ರ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ದಕ್ಷಿಣ ಕನ್ನಡದ ಬಿಜೆಪಿ ನಾಯಕರು ಕೂಡ ಲಕ್ಷಾಂತರ ಅಕ್ರಮ ನುಸುಳುಕೋರರು ಕರ್ನಾಟಕಕ್ಕೆ ಬಂದಿದ್ದಾರೆ, ಅದಕ್ಕಾಗಿಯೇ ಎಸ್‌ಐಆರ್ ಅಗತ್ಯವಿದೆ ಎಂದು ಭಾಷಣ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ನುಸುಳುಕೋರರ ಪಟ್ಟಿ ಕೇಳಿದಾಗ, ಚುನಾವಣಾ ಆಯೋಗ ನೀಡಿದ 600ರಿಂದ 700 ಜನರ ಪಟ್ಟಿಯಲ್ಲಿ ಕೇವಲ ಇಬ್ಬರು ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮೂಲದ ಮಹಿಳೆಯರು ಇದ್ದಾರೆ. ಅವರೂ ಮದುವೆಯಾಗಿ ಇಲ್ಲಿಗೆ ಬಂದವರು ಎಂದು ಅವರು ತಿಳಿಸಿದ್ದಾರೆ.

ಉಳಿದವರಲ್ಲಿ ಭದ್ರತಾ ಸಿಬ್ಬಂದಿ, ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡಲು ಬಂದ ನೇಪಾಳಿಗಳು ಹಾಗೂ ಬೋಧನೆಗಾಗಿ ಬಂದ ಜರ್ಮನ್ ಮತ್ತು ಅಮೆರಿಕದ ಪ್ರಜೆಗಳಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಐದೂವರೆ ಕೋಟಿ ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಲಕ್ಷಾಂತರ ನುಸುಳುಕೋರರಿದ್ದಾರೆ ಎಂದು ಜನರ ಮನಸ್ಸಿನಲ್ಲಿ ಭೀತಿ ಮೂಡಿಸಿ, ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣ ಖರ್ಚು ಮಾಡಿ, ಕೋಟಿಗೂ ಅಧಿಕ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದರಿಂದ ಸಾಧಿಸಿದ್ದೇನು ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಸಾಮಾಜಿಕ ಸೇವೆ ಗುರುತಿಸಿ ಐಕಳ ಹರೀಶ್ ಶೆಟ್ಟಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಿನ್ನಿಗೋಳಿಯ ಐಕಳ ಹರೀಶ್ ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜಾಗತಿಕ…

4 hours ago

ಮಂಗಳೂರು: ಮೀನು ಸಂರಕ್ಷಣೆಗೆ ಬಳಸುವ ಮಂಜುಗಡ್ಡೆ ತಯಾರಿಕಾ ಘಟಕಗಳಿಗೆ ಆಹಾರ ಸುರಕ್ಷತಾ ಅಧಿಕಾರಿಗಳ ಭೇಟಿ

ಹಸಿ ಮೀನುಗಳ ಸಂರಕ್ಷಣೆಗಾಗಿ ಬಳಸಲಾಗುವ ಮಂಜುಗಡ್ಡೆಯ ಗುಣಮಟ್ಟ ಪರಿಶೀಲಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.…

9 hours ago

ಮಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ತಪ್ಪಿಸಲು ಮುನ್ನೆಚ್ಚರಿಕೆ ವಹಿಸಿ: ಯು.ಟಿ. ಖಾದರ್ ಸೂಚನೆ

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆಯಿದ್ದು, ನೀರಿನ ಸದ್ಬಳಕೆ ಹಾಗೂ ಸಂರಕ್ಷಣೆ ಕುರಿತು…

9 hours ago

ಬಂಟ್ವಾಳ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಕಡೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶಾರದ ಮಂಟಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ…

9 hours ago

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿರುವುದು ಖಂಡನೀಯ: ಸುನಿಲ್ ಕುಮಾರ್

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ…

2 days ago

ದಕ್ಷಿಣ ಕನ್ನಡ: ಮಿಜಾರ್‌ನಲ್ಲಿ ಅಭಿಮಾನಿ ಬಸ್–ಸ್ಕೂಟರ್ ನಡುವೆ ಭೀಕರ ಅಪಘಾತ; ಸವಾರ ಗಂಭೀರ

ಮೂಡಬಿದಿರೆ ತಾಲೂಕಿನ ಮಿಜಾರ್‌ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್‌ನಲ್ಲಿ ಬಂದ…

2 days ago