ಹಸಿ ಮೀನುಗಳ ಸಂರಕ್ಷಣೆಗಾಗಿ ಬಳಸಲಾಗುವ ಮಂಜುಗಡ್ಡೆಯ ಗುಣಮಟ್ಟ ಪರಿಶೀಲಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿಎಚ್ ಅವರ ತಂಡ ಜಿಲ್ಲೆಯ ಮಂಜುಗಡ್ಡೆ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮಂಗಳೂರಿನ ಬಂದರು ಧಕ್ಕೆಯಲ್ಲಿರುವ ಮಂಜುಗಡ್ಡೆ ತಯಾರಿಕಾ ಘಟಕಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಅಲ್ಲಿಂದ ಮಂಜುಗಡ್ಡೆಯ ಮಾದರಿಗಳನ್ನು ಸಂಗ್ರಹಿಸಿದರು.
ಈ ಘಟಕಗಳಲ್ಲಿ ನೀರಿನ ಟ್ಯಾಂಕರ್ಗಳ ಮೂಲಕ ಸಿಹಿನೀರನ್ನು ಖರೀದಿಸಿ ಮಂಜುಗಡ್ಡೆ ತಯಾರಿಸಲಾಗುತ್ತಿರುವುದು ಪರಿಶೀಲನೆ ವೇಳೆ ಗಮನಕ್ಕೆ ಬಂದಿದೆ. ಮಂಜುಗಡ್ಡೆ ತಯಾರಿಕೆಗೆ ಬಳಸುವ ನೀರಿನ ಪ್ರಯೋಗಾಲಯ ವರದಿಗಳನ್ನು ಪಡೆದು, ನೀರಿನ ಗುಣಮಟ್ಟ ಖಚಿತಪಡಿಸಿಕೊಂಡ ಬಳಿಕವೇ ಮಂಜುಗಡ್ಡೆ ತಯಾರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಅಲ್ಲದೆ, ಮೀನುಗಳ ಸಂರಕ್ಷಣೆಗಾಗಿ ಫಾರ್ಮಲಿನ್ ಅಥವಾ ಇನ್ಯಾವುದೇ ರಾಸಾಯನಿಕಗಳನ್ನು ಬಳಸಬಾರದು ಎಂದು ಘಟಕದ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಿನ್ನಿಗೋಳಿಯ ಐಕಳ ಹರೀಶ್ ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜಾಗತಿಕ…
ಕರ್ನಾಟಕದಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ ನಾಯಕರಿಗೆ ಹಿರಿಯ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್…
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆಯಿದ್ದು, ನೀರಿನ ಸದ್ಬಳಕೆ ಹಾಗೂ ಸಂರಕ್ಷಣೆ ಕುರಿತು…
ಕಡೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶಾರದ ಮಂಟಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ…
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ…
ಮೂಡಬಿದಿರೆ ತಾಲೂಕಿನ ಮಿಜಾರ್ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್ನಲ್ಲಿ ಬಂದ…