ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಆಧುನಿಕ ತಂತ್ರಜ್ಞಾನದ ಅರಿವಿನ ಕೊರತೆಯಿಂದ ಸೈಬರ್ ಅಪರಾಧ ಹೆಚ್ಚಳ: ಡಾ. ಅನಂತ ಪ್ರಭು

ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಆಧುನಿಕ ತಂತ್ರಜ್ಞಾನದ ಬಳಕೆಯ ಬಗ್ಗೆ ಸೂಕ್ತ ಅರಿವಿನ ಕೊರತೆಯೇ ಸೈಬರ್ ಅಪರಾಧಗಳ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದು ಸೈಬರ್ ಸುರಕ್ಷತಾ ತಜ್ಞ ಡಾ. ಅನಂತ ಪ್ರಭು ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಸಂವಾದಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಎಐ ಸೇರಿದಂತೆ ಕಂಪ್ಯೂಟರ್, ಇಂಟರ್‌ನೆಟ್, ಮೊಬೈಲ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವವರು ಅವುಗಳ ಸುರಕ್ಷಿತ ಬಳಕೆಯ ಕುರಿತು ಅಗತ್ಯ ಮಾಹಿತಿ ಹೊಂದಿರಬೇಕು. ಸೂಕ್ತ ಎಚ್ಚರಿಕೆ ವಹಿಸದಿದ್ದರೆ ಈ ಸಾಧನಗಳ ಮೂಲಕ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆಯಿದೆ. ಇದರಿಂದ ಬಳಕೆದಾರರು ಹಲವು ರೀತಿಯ ಸಂಕಷ್ಟಗಳಿಗೆ ಸಿಲುಕುವ ಅಪಾಯವಿದೆ ಎಂದು ಎಚ್ಚರಿಸಿದರು.

ಸೈಬರ್ ಅಪರಾಧಗಳಿಂದ ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಜ್ಞಾನ ಹೊಂದಿರುವುದು ಅತ್ಯಗತ್ಯ. ಡಿಜಿಟಲ್ ಸಾಧನಗಳ ಬಳಕೆಯಲ್ಲಿ ಜಾಗರೂಕತೆ ಹಾಗೂ ಸುರಕ್ಷತಾ ನಿಯಮಗಳ ಪಾಲನೆಗೆ ಆದ್ಯತೆ ನೀಡಬೇಕು ಎಂದು ಡಾ. ಅನಂತ ಪ್ರಭು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!