ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿಪಕ್ಷಗಳು ಸಂವಿಧಾನಕ್ಕೆ ಬೆಲೆ ನೀಡುತ್ತಿಲ್ಲ: ಸುರೇಶ್ ಗೋಪಿ ವಾಗ್ದಾಳಿ

ದೇಶದಲ್ಲಿ ವಿರೋಧ ಪಕ್ಷಗಳು ಸಂವಿಧಾನಕ್ಕೆ ಬೆಲೆ ನೀಡುತ್ತಿಲ್ಲ. ಹೀಗಾಗಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಚುನಾವಣಾ ವಿಚಾರದಲ್ಲಿ ಆಡಳಿತ ಪಕ್ಷವೇ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ರಾಜ್ಯ ಸಚಿವ, ನಟ ಸುರೇಶ್ ಗೋಪಿ ಆರೋಪಿಸಿದ್ದಾರೆ.

ಮಂಗಳೂರು ನಗರದ ಕದ್ರಿ ಮೈದಾನದಲ್ಲಿ ಬಿಜೆಪಿ ಮಂಗಳೂರು ವಿಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಘಟಕಗಳ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ‘ಪ್ರಜಾಪ್ರಭುತ್ವ ಉಳಿಸಿ–ಅರಾಜಕತೆ ಅಳಿಸಿ’ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ ಸುರೇಶ್ ಗೋಪಿ, ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಿಗೂ ಹೋಗುವುದಿಲ್ಲ. ದೇಶವನ್ನು ಮುನ್ನಡೆಸುತ್ತಲೇ ಇರುತ್ತಾರೆ. ರಾಜಕೀಯವಾಗಿ ನಿರ್ನಾಮವಾಗುವುದು ವಿರೋಧ ಪಕ್ಷದ ನಾಯಕರೇ ಹೊರತು ಪ್ರಧಾನಿಯಲ್ಲ ಎಂದು ವ್ಯಂಗ್ಯವಾಡಿದರು.

ವಿರೋಧ ಪಕ್ಷದ ನಾಯಕರು ರಾಜಕೀಯವಾಗಿ ಅಳಿದುಹೋಗುತ್ತಾರೆ ಅಥವಾ ಅರಬ್ಬಿ ಸಮುದ್ರಕ್ಕೆ ಎಸೆಯಲ್ಪಡುತ್ತಾರೆ ಎಂದು ತೀಕ್ಷ್ಣವಾಗಿ ಟೀಕಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!