ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಚುನಾವಣಾ ವ್ಯವಸ್ಥೆಯ ಮೇಲೆ ಜನರ ನಂಬಿಕೆ ಕಳೆಯಲು ಕಾಂಗ್ರೆಸ್ ದುರುದ್ದೇಶಪೂರಿತ ಅಭಿಯಾನ: ತೇಜಸ್ವಿ ಸೂರ್ಯ ಆರೋಪ

ಕಳೆದ ಎರಡೂವರೆ-ಮೂರು ವರ್ಷಗಳಿಂದ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರು ದೇಶದ ಚುನಾವಣಾ ವ್ಯವಸ್ಥೆಯ ಮೇಲೆ ಜನರ ನಂಬಿಕೆ ಕಳೆಯುವ ದುರುದ್ದೇಶಪೂರಿತ ಅಭಿಯಾನ ನಡೆಸುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಬಿಜೆಪಿ ಮಂಗಳೂರು ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ನಡೆದ ಅಶಾಂತಿ ಹಾಗೂ ಆಡಳಿತ ಬದಲಾವಣೆಯ ಕ್ರಾಂತಿಯನ್ನು ಭಾರತದಲ್ಲೂ ಸೃಷ್ಟಿಸಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ದೂರಿದರು.

ಬಿಜೆಪಿ ಇವಿಎಂ ಎಂಜಿನಿಯರಿಂಗ್ ಮೂಲಕವೇ ಗೆಲ್ಲುತ್ತಿದ್ದರೆ, 2014, 2019 ಹಾಗೂ 2024ರ ಸಾರ್ವತ್ರಿಕ ಚುನಾವಣೆಗಳಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದಾಗ ಇವಿಎಂ ದೋಷರಹಿತವಾಗಿತ್ತೇ ಎಂದು ಪ್ರಶ್ನಿಸಿದರು.

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗುವ ಮುನ್ನವೇ 2014ರಿಂದ ಈವರೆಗೆ ಕಾಂಗ್ರೆಸ್ ಸುಮಾರು 95 ಚುನಾವಣೆಗಳಲ್ಲಿ ಸೋಲು ಕಂಡಿದೆ. ಇದಕ್ಕೆ ಯಾರನ್ನು ಹೊಣೆ ಮಾಡುತ್ತೀರಿ ಎಂದು ಪ್ರಶ್ನಿಸಿದ ಅವರು, ಇವಿಎಂ ಹ್ಯಾಕ್ ಆಗುತ್ತದೆ ಎಂದಾದರೆ ಅದೇ ಇವಿಎಂ ಬಳಸಿ ಕರ್ನಾಟಕ, ತೆಲಂಗಾಣ ಹಾಗೂ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಹೇಗೆ ಎಂದು ತಿರುಗೇಟು ನೀಡಿದರು.

ದೇಶದಲ್ಲಿ ಈವರೆಗೆ 12 ಬಾರಿ ಎಸ್‌ಐಆರ್ ನಡೆದಿದ್ದು, ಅದರಲ್ಲಿ 11 ಬಾರಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲೇ ನಡೆದಿದೆ. ಅಂದಿನ ನಿಯಮಗಳೇ ಈಗಲೂ ಜಾರಿಯಲ್ಲಿರುವಾಗ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದೇಕೆ ಎಂದು ತೇಜಸ್ವಿ ಸೂರ್ಯ ಪ್ರಶ್ನಿಸಿದರು.

ಸಮಾವೇಶಕ್ಕೂ ಮುನ್ನ ನಗರದ ಕ್ಲಾಕ್ ಟವರ್‌ನಿಂದ ಕದ್ರಿ ಮೈದಾನದವರೆಗೆ ಬಿಜೆಪಿ ವತಿಯಿಂದ ಬೃಹತ್ ಪಾದಯಾತ್ರೆ ನಡೆಯಿತು. ಬಳಿಕ ಕದ್ರಿ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ಜರುಗಿತು.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!