ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಪ್ರದಾಯಬದ್ಧ ಎಣ್ಣೆ ಶಾಸ್ತ್ರ; ತೈಲಾಭ್ಯಂಜನದೊಂದಿಗೆ ದೀಪಾವಳಿ ಸಂಭ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ಶ್ರೀಕೃಷ್ಣಮಠದಲ್ಲಿ ಸಾಂಪ್ರದಾಯಿಕ ಎಣ್ಣೆ ಶಾಸ್ತ್ರ ಹಾಗೂ ತೈಲಾಭ್ಯಂಜನ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.

ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಅವರು ತಮ್ಮ ವಿದ್ಯಾಗುರುಗಳಾದ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಗಳ ಸಮ್ಮುಖದಲ್ಲಿ ಚಂದ್ರಶಾಲೆಯಲ್ಲಿ ಎಣ್ಣೆ ಶಾಸ್ತ್ರ ನೆರವೇರಿಸಿದರು.

ಈ ಸಂದರ್ಭದಲ್ಲಿ ಯತಿಗಳು ಪರಸ್ಪರ ಎಣ್ಣೆ ಶಾಸ್ತ್ರ ನೆರವೇರಿಸಿಕೊಂಡರು. ಬಳಿಕ ಭಕ್ತಾದಿಗಳಿಗೂ ಎಣ್ಣೆ ಶಾಸ್ತ್ರ ಮಾಡಲಾಯಿತು. ಮಠದ ಸಿಬ್ಬಂದಿಯೂ ಸಂಪ್ರದಾಯದಂತೆ ಎಣ್ಣೆ ಶಾಸ್ತ್ರ ಹಾಗೂ ತೈಲಾಭ್ಯಂಜನ ಮಾಡಿಕೊಳ್ಳುವ ಮೂಲಕ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಅಷ್ಟಮಠಗಳ ವಿದ್ವಾಂಸರು, ಪರ್ಯಾಯ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಶ್ರೀಕೃಷ್ಣಮಠದಲ್ಲಿ ನಡೆದ ಈ ಸಂಪ್ರದಾಯಬದ್ಧ ಆಚರಣೆ ದೀಪಾವಳಿ ಹಬ್ಬದ ಧಾರ್ಮಿಕ ಮಹತ್ವ ಹಾಗೂ ಉಡುಪಿಯ ಮಠದ ಪರಂಪರೆಯನ್ನು ಮತ್ತೊಮ್ಮೆ ಸ್ಮರಿಸುವಂತಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!