ತಾಲೂಕಿನ ಪೊಳಲಿ ಸರ್ಕಾರಿ ಪ್ರೌಢಶಾಲೆಯ ವಿಂಶತಿ ಪರ್ವ-2026 ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ ನವೆಂಬರ್ 14ರಂದು ಶಾಲಾ ಆವರಣದಲ್ಲಿ ನಡೆಯಲಿದೆ.
ಈ ಪ್ರಯುಕ್ತ ಸಭಾ ಕಾರ್ಯಕ್ರಮ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಗೌರವ ಉಪಸ್ಥಿತಿ ವಹಿಸಲಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಂಜುನಾಥ ಭಂಡಾರಿ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ ಪ್ರದರ್ಶನ, ನೃತ್ಯ ವೈವಿಧ್ಯ, ಯಕ್ಷಗಾನ ಪ್ರದರ್ಶನ ಹಾಗೂ ‘ಉಂದು ಸತ್ಯನಾ’ ಎಂಬ ತುಳು ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಶಾಲೆಯ ವಿಂಶತಿ ಪರ್ವದ ಸಂಭ್ರಮದೊಂದಿಗೆ ನಡೆಯಲಿರುವ ಈ ವಾರ್ಷಿಕೋತ್ಸವದಲ್ಲಿ ಹಳೆ ವಿದ್ಯಾರ್ಥಿಗಳು, ಪೋಷಕರು, ಊರಿನ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…
ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ…
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್…
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ…