ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕ್ಯಾಂಟೀನ್ಗಳಲ್ಲಿ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.

ಡಾ. ಪ್ರವೀಣ್ ಕುಮಾರ್ ನೇತೃತ್ವದ ತಂಡ ಸುರತ್ಕಲ್ನ ಶ್ರೀನಿವಾಸ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಮೆಸ್ ಹಾಗೂ ಅಡುಗೆ ಕೋಣೆಗೆ ಭೇಟಿ ನೀಡಿ ತಪಾಸಣೆ ನಡೆಸಿತು. ಆಹಾರ ತಯಾರಿಕೆಗೆ ಬಳಸುವ ಸಾಮಗ್ರಿಗಳ ಮಾದರಿಗಳನ್ನು ಸಂಗ್ರಹಿಸಿ, ಪರಿಶೀಲನೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಯಿತು.

ಈ ವೇಳೆ ಕ್ಯಾಂಟೀನ್ ಮತ್ತು ಅಡುಗೆ ಸಿಬ್ಬಂದಿಗೆ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಲಾಯಿತು. ಅಲ್ಲದೆ, ಮುಲ್ಕಿ ಕಾರ್ನಾಡ್ ವ್ಯಾಪ್ತಿಯ ಬೇಕರಿಗಳಲ್ಲಿಯೂ ಸಿಹಿತಿಂಡಿಗಳ ಗುಣಮಟ್ಟ ಪರಿಶೀಲನೆ ನಡೆಸಲಾಯಿತು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.



