ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ಮಾನವ ತಲೆಬುರುಡೆಯೊಂದು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ವಿದ್ಯುತ್ ಕಂಬಗಳಿಗೆ ಅಡ್ಡವಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುವ ಕೆಲಸದಲ್ಲಿ ತೊಡಗಿದ್ದ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರಿಗೆ ಹೆದ್ದಾರಿ ಬದಿಯಲ್ಲಿ ಮಾನವ ತಲೆಬುರುಡೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ನವೆಂಬರ್ 12ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ದೂರಿನ ಮೇರೆಗೆ ಪೊಲೀಸರು ಅರ್ಜಿಯನ್ನು ಸ್ವೀಕರಿಸಿದ್ದು, ಘಟನೆಯ ಕುರಿತು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ.
ಪತ್ತೆಯಾಗಿರುವ ತಲೆಬುರುಡೆಯ ಮೂಲ, ಅದು ಅಲ್ಲಿಗೆ ಬಂದಿರುವ ಸಂದರ್ಭ ಹಾಗೂ ಇತರ ವಿವರಗಳು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಈ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…
ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ…
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್…
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ…