ಇತ್ತೀಚಿಗಿನ ದಿನಗಳಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ವಿರುದ್ಧ ಅಪಪ್ರಚಾರ ಹಾಗೂ ಅವಹೇಳನಕಾರಿ ಹೇಳಿಕೆಗಳು ನಿರಂತರವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯನ್ನು ಖಂಡಿಸಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಶ್ರೀ ಜನಾರ್ದನ ಸ್ವಾಮಿ ರಥ ಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಜಾಥಾ ನಡೆದು ಬೃಹತ್ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡನೆ ನಡೆಯಿತು.
ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾಕ್ಟರ್ ಎಲ್ ಎಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು. ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯ ಚಂದ್ರ, ಜನಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷ ರಾಜಣ್ಣ ಕೊರವಿ ಹಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜೀಲರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಯ ಆಡಳಿತ ಮುಖ್ಯಸ್ಥ ಶರತ್ ಕೃಷ್ಣ ಪಡ್ಡೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಇಚ್ಚಿಲ, ಕಾಸಿಂ ಮಲ್ಲಿಗೆ ಗೌಡ ಮನೆ ಉಪಸ್ಥಿತರಿದ್ದರು. ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…