ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಪಿಂಕ್ ಲೈನ್ ಮೆಟ್ರೋ ಎತ್ತರಿಸಿದ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ನಮ್ಮ ಮೆಟ್ರೋದ ಪಿಂಕ್ ಲೈನ್‌ನ ಕಾಳೇನ ಅಗ್ರಹಾರದಿಂದ ತಾವರಕೆರೆವರೆಗಿನ 7.5 ಕಿ.ಮೀ. ಉದ್ದದ ಎತ್ತರಿಸಿದ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ನ.13) ಬೆಂಗಳೂರಿನಲ್ಲಿ ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಅವರು ರಾಜ್ಯಪಾಲರಾದ ಡಾ. ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರೊಂದಿಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಬಿಳೇಕಹಳ್ಳಿ-ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಅವರು ಸಂಚರಿಸಿದರು.

ಪ್ಲಾಟ್‌ಫಾರ್ಮ್‌ಗೆ ತೆರಳುವ ಮುನ್ನ ಪ್ರಧಾನಿ ಅವರು ಮೆಟ್ರೋ ಟಿಕೆಟ್ ಖರೀದಿಸಿದರು. ರೈಲು ಹತ್ತುವ ಮೊದಲು ಬಿಎಂಆರ್‌ಸಿಎಲ್ ಅಧಿಕಾರಿಗಳು ಯೋಜನೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿಗೆ ಕೆಂಪೇಗೌಡರ ಪ್ರತಿಮೆಯನ್ನು ಸ್ಮರಣಿಕೆಯಾಗಿ ನೀಡಿದರು.

ಅಂದಾಜು 3,470 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ 7.5 ಕಿ.ಮೀ. ಮಾರ್ಗದಲ್ಲಿ ಒಟ್ಟು ಆರು ನಿಲ್ದಾಣಗಳಿವೆ. ಕಾಳೇನ ಅಗ್ರಹಾರ, ಹುಳಿಮಾವು, ಬಿಳೇಕಹಳ್ಳಿ-ಐಐಎಂಬಿ, ಎನ್.ಎಸ್. ಪಾಳ್ಯ-ಜೆ.ಪಿ. ನಗರ 4ನೇ ಹಂತ, ಜಯದೇವ ಆಸ್ಪತ್ರೆ ಮತ್ತು ಎಸ್.ಜಿ. ಪಾಳ್ಯ ನಿಲ್ದಾಣಗಳು ಈ ಮಾರ್ಗದಲ್ಲಿವೆ.

ಜಯದೇವ ಆಸ್ಪತ್ರೆ ಮೆಟ್ರೋ ನಿಲ್ದಾಣವು ಹಳದಿ ಮಾರ್ಗದೊಂದಿಗೆ ಇಂಟರ್‌ಚೇಂಜ್ ಸೌಲಭ್ಯ ಹೊಂದಿದೆ. ಪ್ರಧಾನಿ ಮೋದಿ ಅವರು ಉದ್ಘಾಟಿಸಿದ ಈ ಮಾರ್ಗವು ನವೆಂಬರ್ 14ರಿಂದ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!