ಉದ್ಯೋಗ ನಿಮಿತ್ತ ಬೈಕ್ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ಚುಂಗಿಗುಡ್ಡೆ ನಿವಾಸಿ ಪ್ರತಿಭಾವಂತ ಯುವ ಇಂಜಿನಿಯರ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ನಡೆದಿದೆ.
ಮೃತ ಯುವಕನನ್ನು ಚುಂಗಿಗುಡ್ಡೆ ನಿವಾಸಿ ನಾರಾಯಣ ಹೆಬ್ಬಾರ್ ಅವರ ಪುತ್ರ ಅಕ್ಷಯ್ ಎನ್. ಹೆಬ್ಬಾರ್ ಎಂದು ಗುರುತಿಸಲಾಗಿದೆ.
ಅಕ್ಷಯ್ ಅವರು ಚುಂಗಿಗುಡ್ಡೆಯಲ್ಲಿರುವ ಮನೆಯಿಂದ ಬೈಕ್ನಲ್ಲಿ ಬೆಂಗಳೂರಿನತ್ತ ಪ್ರಯಾಣ ಆರಂಭಿಸಿದ್ದರು. ಪ್ರಯಾಣದ ನಡುವೆ ಅಪಘಾತ ಸಂಭವಿಸುವುದಕ್ಕೂ ಮುನ್ನ ತಾಯಿಗೆ ದೂರವಾಣಿ ಕರೆ ಮಾಡಿದ್ದರು ಎನ್ನಲಾಗಿದೆ.
ಚನ್ನರಾಯಪಟ್ಟಣ ಸಮೀಪ ಸಂಚರಿಸುತ್ತಿದ್ದ ವೇಳೆ ಟ್ರಕ್ಗೆ ಬೈಕ್ನ ಹ್ಯಾಂಡಲ್ನ ಭಾಗ ತಾಗಿ, ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ಆದರೆ ಅಪಘಾತದ ನಿಖರ ಕಾರಣ ಹಾಗೂ ಘಟನೆಯ ಕುರಿತ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.
ಓದಿನಲ್ಲಿ ಪ್ರತಿಭಾವಂತನಾಗಿದ್ದ ಅಕ್ಷಯ್ ಉತ್ತಮ ಉದ್ಯೋಗ ಪಡೆದು ತಂದೆ-ತಾಯಿಯ ಕನಸುಗಳಿಗೆ ಆಸರೆಯಾಗಿದ್ದರು. ಆದರೆ ವಿಧಿಯಾಟಕ್ಕೆ ಯುವಕನ ಬದುಕು ಅರ್ಧದಲ್ಲೇ ಅಂತ್ಯಗೊಂಡಿರುವುದು ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಗ್ರಾಮಸ್ಥರನ್ನು ತೀವ್ರ ದುಃಖಕ್ಕೀಡು ಮಾಡಿದೆ.
ಅಕ್ಷಯ್ ಅವರ ಅಕಾಲಿಕ ನಿಧನದಿಂದ ಚುಂಗಿಗುಡ್ಡೆ ಹಾಗೂ ಪಡುಕೋಣೆ ಪರಿಸರದಲ್ಲಿ ಶೋಕದ ಛಾಯೆ ಆವರಿಸಿದೆ.
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…
ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ…
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್…
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ…