ಜನ ಮನದ ನಾಡಿ ಮಿಡಿತ

Advertisement

ಅಪಘಾತ ಹಿನ್ನಲೆ ಪ್ರಶಾಂತ್ ಮಿದುಳು ನಿಷ್ಕ್ರಿಯ; ಅಂಗಾಂಗ ದಾನ

ಕಾಪು: ಅಪಘಾತದಿಂದಾಗಿ ಮಿದುಳು ನಿಷ್ಕ್ರಿಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.


ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮಾ ಸಾಬು ಸಭಾಭವನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದರು.
ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಸ್ನೇಹಿತರಾದ ಪ್ರವೀಣ್ ಮತ್ತು ಅಭಿಷೇಕ್ ಅವರು ಸ್ಥಳೀಯರ ಸಹಾಯದಿಂದ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಅಲ್ಲಿನ ವೈದ್ಯರ ಸೂಚನೆ ಮೆರೆಗೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಶಾಂತ್‌ರವರ ತಲೆಗೆ ಗಂಭೀರವಾದ ಗಾಯವಾಗಿದ್ದು, ಅವರ ಮೆದುಳು ನಿಷ್ಟ್ರಿಯಗೊಂಡಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಪ್ರಶಾಂತ್ ಕೊನೆಯುಸಿರೆಳೆದರು .
ಇನ್ನೂ ಆಸ್ಪತ್ರೆಯ ವೈದ್ಯರು ಮೃತರ ಸಂಬ0ಧಿಕರಿಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದ್ದರು. ಮೃತರ ಸಹೋದರಿ ಪ್ರಮೀಳಾ ಅವರು ಸಹೋದರನ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸುವಲ್ಲಿ ಮಹತ್ತರವಾದ ಪಾತ್ರವಹಿಸಿದ್ದಾರೆ.

ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ ಬಿ. ಜಗನ್ನಾಥ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಯುವಕನ ಕಿಡ್ನಿ ಮತ್ತು ಲಿವರ್ ಅನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ಮೂಲಕ ಸುರಕ್ಷಿತವಾಗಿ ತೆಗೆದು ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!