ಕಾಪು: ಅಪಘಾತದಿಂದಾಗಿ ಮಿದುಳು ನಿಷ್ಕ್ರಿಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮಾ ಸಾಬು ಸಭಾಭವನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದರು.
ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಸ್ನೇಹಿತರಾದ ಪ್ರವೀಣ್ ಮತ್ತು ಅಭಿಷೇಕ್ ಅವರು ಸ್ಥಳೀಯರ ಸಹಾಯದಿಂದ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಅಲ್ಲಿನ ವೈದ್ಯರ ಸೂಚನೆ ಮೆರೆಗೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಶಾಂತ್‌ರವರ ತಲೆಗೆ ಗಂಭೀರವಾದ ಗಾಯವಾಗಿದ್ದು, ಅವರ ಮೆದುಳು ನಿಷ್ಟ್ರಿಯಗೊಂಡಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಪ್ರಶಾಂತ್ ಕೊನೆಯುಸಿರೆಳೆದರು .
ಇನ್ನೂ ಆಸ್ಪತ್ರೆಯ ವೈದ್ಯರು ಮೃತರ ಸಂಬ0ಧಿಕರಿಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದ್ದರು. ಮೃತರ ಸಹೋದರಿ ಪ್ರಮೀಳಾ ಅವರು ಸಹೋದರನ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸುವಲ್ಲಿ ಮಹತ್ತರವಾದ ಪಾತ್ರವಹಿಸಿದ್ದಾರೆ.
ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ ಬಿ. ಜಗನ್ನಾಥ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಯುವಕನ ಕಿಡ್ನಿ ಮತ್ತು ಲಿವರ್ ಅನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ಮೂಲಕ ಸುರಕ್ಷಿತವಾಗಿ ತೆಗೆದು ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…