ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 1,510 ಅಸಹಜ ಸಾವುಗಳ ಆರೋಪಕ್ಕೆ ಗ್ರಾಮಸ್ಥರ ಆಕ್ಷೇಪ

ಧರ್ಮಸ್ಥಳದಲ್ಲಿ 2000ರಿಂದ 2014ರವರೆಗೆ 1,510 ಅಸಹಜ ಸಾವುಗಳು ಸಂಭವಿಸಿವೆ ಎಂಬ ಆರೋಪಕ್ಕೆ ಧರ್ಮಸ್ಥಳದ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಖ್ಯೆ ಸತ್ಯಕ್ಕೆ ದೂರವಾಗಿದ್ದು, ಊಹಾಪೋಹದ ಆಧಾರದಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂದು ಧರ್ಮಸ್ಥಳ ನಿವಾಸಿ ಶ್ರೀನಿವಾಸ್ ರಾವ್ ಆರೋಪಿಸಿದ್ದಾರೆ.

ಧರ್ಮಸ್ಥಳದಲ್ಲಿ ಗ್ರಾಮಸ್ಥರ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯ ಪ್ರಕರಣದ ನ್ಯಾಯ ಹೋರಾಟವನ್ನು ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಸೌಜನ್ಯ ಪ್ರಕರಣದ ತನಿಖೆ ಹಾಗೂ ನ್ಯಾಯದ ಹೋರಾಟವನ್ನು ಬೇರೆ ಬೇರೆ ಆಯಾಮಗಳಿಗೆ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ. ಇದರೊಂದಿಗೆ ಧರ್ಮಸ್ಥಳ ಕ್ಷೇತ್ರ ಮತ್ತು ಗ್ರಾಮಸ್ಥರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿದೆ. ಸೌಜನ್ಯಳ ಕೊಲೆ ಮಾಡಿದವರು ಯಾರೇ ಆಗಿರಲಿ, ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂಬುದು ನಮ್ಮ ಸ್ಪಷ್ಟ ನಿಲುವು. ಸೌಜನ್ಯಳಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

2000ರಿಂದ 2014ರವರೆಗೆ ಧರ್ಮಸ್ಥಳದಲ್ಲಿ 1,510 ಯುಡಿಆರ್ ಪ್ರಕರಣಗಳು ದಾಖಲಾಗಿವೆ ಎಂಬ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಆದರೆ ಇಲಾಖೆಯಿಂದ ದೊರೆತ ಮಾಹಿತಿಯ ಪ್ರಕಾರ ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ದಾಖಲಾಗಿರುವುದು 374 ಪ್ರಕರಣಗಳು ಮಾತ್ರ. ಇದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇವೆ ಎಂದು ಶ್ರೀನಿವಾಸ್ ರಾವ್ ಸ್ಪಷ್ಟಪಡಿಸಿದರು.

1,510 ಎಂಬ ಸಂಖ್ಯೆಯನ್ನು ಊಹಾಪೋಹದ ಆಧಾರದಲ್ಲಿ ಸೃಷ್ಟಿಸಲಾಗಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ ಅವರು, ಈ ಸಂಖ್ಯೆಯ ಸತ್ಯಾಸತ್ಯತೆಯನ್ನು ಸರ್ಕಾರ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ಆಧಾರರಹಿತ ಸುದ್ದಿಗಳಿಂದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ರಾಜ್ಯ ಹಾಗೂ ದೇಶಾದ್ಯಂತ ಅಪನಂಬಿಕೆ ಮೂಡುವಂತಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸರ್ಕಾರ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಜಯಂತ್ ಟಿ. ಅವರ ವಿರುದ್ಧವೂ ಆರೋಪಗಳನ್ನು ಮಾಡಿದ ಅವರು, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಆರೋಪಗಳ ಹಿಂದೆ ದೊಡ್ಡ ಷಡ್ಯಂತ್ರವಿದೆ. ಈ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

ಸೌಜನ್ಯ ಪ್ರಕರಣದಲ್ಲಿ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂಬುದೇ ನಮ್ಮ ಆಶಯ. ಆದರೆ ನ್ಯಾಯದ ಹೋರಾಟದ ಹೆಸರಿನಲ್ಲಿ ಧರ್ಮಸ್ಥಳ ಕ್ಷೇತ್ರ ಮತ್ತು ಗ್ರಾಮಸ್ಥರ ಗೌರವಕ್ಕೆ ಧಕ್ಕೆ ತರುವ ಪ್ರಯತ್ನಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಶ್ರೀನಿವಾಸ್ ರಾವ್ ತಿಳಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಪೊಲೀಸರ ಕರ್ತವ್ಯದಲ್ಲಿ ಒತ್ತಡ ಸಹಜವಾಗಿದ್ದು, ಅದನ್ನು ನಿವಾರಿಸಿಕೊಳ್ಳಲು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ. ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜತೆಗೆ…

4 hours ago

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಾಗೂ ಡಿಜಿಟಲ್ ಹಣಕಾಸು ವಂಚನೆ ಪ್ರಕರಣಗಳ ತನಿಖೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಲ್ಲಿದ್ದ ದಕ್ಷಿಣ…

4 hours ago

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಉಪ್ಪಿನಂಗಡಿ ಬಳಿ ನೂತನ ಟೋಲ್‌ಗೇಟ್ ಆರಂಭಿಸಿರುವುದನ್ನು ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಗುರುವಾರ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಿ…

4 hours ago

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆ ಸೇತುವೆಯಲ್ಲಿ ಎರಡು ತಿಂಗಳ ಹಿಂದೆ ನೆಲಕ್ಕುರುಳಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ ಮರುಜೋಡಣೆ ಮಾಡಿದೆ.…

4 hours ago

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಚನಾ ಫಲಕ ಹಾಗೂ ಪಾರ್ಕಿಂಗ್ ಲೈಟ್ ಅಳವಡಿಸದೆ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು…

4 hours ago

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…

1 day ago