ಕರಾವಳಿ

ಮಂಗಳೂರು: ಯುವ ಕಲಾವಿದರಿಗೆ ವೇದಿಕೆ ಕಲ್ಪಿಸುವುದು ಉತ್ತಮ ಕಾರ್ಯ: ಕೃಷ್ಣರಾಜ ತಂತ್ರಿ

ಯಕ್ಷಗುರು ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದ ಮಯೂರ ಪ್ರತಿಷ್ಠಾನ, ಮಂಗಳೂರು ಇದರ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ‘ಮಯೂರ ಯಾನ-2’ ಕಾರ್ಯಕ್ರಮ ನ.14ರಂದು ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ತಂತ್ರಿಗಳಾದ ವೇ.ಮೂ. ಕೃಷ್ಣರಾಜ ತಂತ್ರಿ ಅವರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕರಾವಳಿಯ ಗಂಡುಕಲೆ ಯಕ್ಷಗಾನವು ಪುರಾಣ ಜ್ಞಾನವನ್ನು ಜನರಿಗೆ ತಲುಪಿಸುವ ಮಹತ್ವದ ಮಾಧ್ಯಮವಾಗಿದೆ. ಆರಾಧನಾ ಕೇಂದ್ರಗಳಲ್ಲಿ ಯಕ್ಷಗಾನ ಪ್ರದರ್ಶನಗಳು ನಡೆಯುತ್ತಿರುವುದು ಸಂತಸದ ವಿಚಾರ. ಈ ನಿಟ್ಟಿನಲ್ಲಿ ದೇವಸ್ಥಾನದ ವತಿಯಿಂದಲೂ ಯಕ್ಷಗಾನ ಕಲೆಗೆ ಸರ್ವ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಯುವ ಕಲಾವಿದರನ್ನು ಗುರುತಿಸಿ ಉತ್ತೇಜಿಸುವುದು ಶ್ಲಾಘನೀಯ ಕಾರ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಯೂರ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಪಿ. ಸದಾಶಿವ ಐತಾಳ್ ಮಾತನಾಡಿ, ಯಕ್ಷಗಾನ ಕಲೆಯ ಉಳಿವು, ಬೆಳವಣಿಗೆ ಹಾಗೂ ಯುವ ಕಲಾವಿದರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಮಕ್ಕಳ ಪೋಷಕರ ಸಹಕಾರದೊಂದಿಗೆ ಮಯೂರ ಪ್ರತಿಷ್ಠಾನವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಕ್ಷದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮುಖಂಡ ರವೀಂದ್ರ ನಾಯಕ್ ಕೆ., ವಿ ಇನ್‌ಫಾ ಕನ್‌ಸ್ಟ್ರಕ್ಷನ್ಸ್ ಮತ್ತು ಬಿಲ್ಡರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಲಯನ್ ರಮಾನಂದ ನೂಜಿಪ್ಪಾಡಿ, ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಮೊಕ್ತೇಸರ ಭಾಸ್ಕರ್ ಕೆ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮಯೂರ ಪ್ರತಿಷ್ಠಾನದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಡೆದ ‘ಮಯೂರ ಯಾನ-2’ ಕಾರ್ಯಕ್ರಮವು ಯಕ್ಷಗಾನ ಕಲೆಯ ಪ್ರೋತ್ಸಾಹ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಆಶಯವನ್ನು ಸಾರಿತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಂಟ್ವಾಳದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಮನೆಗಳಿಗೆ ಹಾನಿ; ಕೊಟ್ಟಿಗೆಗೆ ಬೆಂಕಿ

ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…

4 hours ago

ಬೆಂಗಳೂರು: ಬೆಂಗಳೂರಿನ ರಾಜ್ಯೋತ್ಸವ ಸಾಧಕರ ಸಮಾಗಮಕ್ಕೆ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷ

ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…

4 hours ago

ಅಬುಧಾಬಿ : ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’

ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…

23 hours ago

ವಿಟ್ಲ: ಕತ್ತಿ ಬೀಸಿದ ಪರಿಣಾಮ ವ್ಯಕ್ತಿ ಸಾವು: 24 ವರ್ಷದ ಯುವತಿ ಬಂಧನ

ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…

24 hours ago

ಮಂಗಳೂರು: ವಳಾಲು ಟೋಲ್ ಆರಂಭದ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಮುತ್ತಿಗೆ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…

24 hours ago

ಮಂಗಳೂರು: ಪತ್ನಿ ಹತ್ಯೆ ಪ್ರಕರಣ: ಪತಿಗೆ 5 ವರ್ಷ ಜೈಲು ಶಿಕ್ಷೆ

ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…

24 hours ago