ಕುತ್ತಾರು; ಕುತ್ತಾರ್ ಸುಭಾಷನಗರದ ನಿವಾಸಿ ಸುಶಾಂತ್ (17) ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಮಂಗಳೂರಿನ ಕೆಪಿಟಿಯಲ್ಲಿ ಡಿಪೆÇ್ಲಮಾಗೆ ಸೇರ್ಪಡೆಗೊಂಡ ಸುಶಾಂತ್ ಕಾಲೇಜಿಗೆ ಹೋಗುವ ಮೊದಲ ದಿನವೇ ಮನೆಯವರಲ್ಲಿ ಖರ್ಚಿಗೆ ಹಣ ಕೇಳಿದ್ದಾರೆ. ಆದರೆ ಮನೆಯವರು ಹಣವನ್ನು ನೀಡದ ಹಿನ್ನಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಥಮ ಪಿಯುಸಿಯನ್ನು ಕಪಿತಾನಿಯೋದಲ್ಲಿ ಮುಗಿಸಿದ್ದ ಸುಶಾಂತ್ ನಗರದ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪೆÇ್ಲಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆ.2ಕ್ಕೆ ಸೇರಿಸಿದ್ದಾರೆ. ಈ ವೇಳೆ 500 ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು.
ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದ್ದಾನೆ. ಈ ವೇಳೆ ಮನೆಯವರು ಹಣ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಮನೆಯ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಉಳ್ಳಾಲ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…