ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಜಾನುವಾರು ಕಳ್ಳತನ ಮಾಡಿ ಕೇರಳಕ್ಕೆ ಸಾಗಿಸಲು ಯತ್ನ: ಇಬ್ಬರ ಬಂಧನ, ಎರಡು ಕರುಗಳ ರಕ್ಷಣೆ

ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಕಳ್ಳತನ ಮಾಡಿ ಕೇರಳಕ್ಕೆ ಸಾಗಿಸಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಎರಡು ಗಂಡು ಕರುಗಳನ್ನು ರಕ್ಷಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಹಾಶಿರ್ ಎ. ಮತ್ತು ಸಂಶುದ್ದೀನ್ ಎಸ್.ಎಂ. ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡಿನ ರಂಶಿ ಎಂಬಾತನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಬುಧವಾರ ಬೆಳಗಿನ ಜಾವ ಸುಮಾರು 4.10ರ ವೇಳೆಗೆ ಸುಳ್ಯ ಕಸಬಾದ ಗಾಂಧಿನಗರ ಶಾಲಾ ಮೈದಾನದಲ್ಲಿ ಜಾನುವಾರು ಕಳ್ಳತನಕ್ಕೆ ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ವೇಳೆ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು, ಅವರ ಬಳಿಯಿದ್ದ ಎರಡು ಗಂಡು ಕರುಗಳನ್ನು ರಕ್ಷಿಸಿದ್ದಾರೆ.

ಆರೋಪಿಗಳು ಜಾನುವಾರುಗಳನ್ನು ಕೇರಳಕ್ಕೆ ಸಾಗಿಸಿ, ಅಕ್ರಮವಾಗಿ ವಧೆ ಮಾಡಿ ಮಾಂಸಕ್ಕಾಗಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಈ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!