ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಪತ್ರಕರ್ತ ಅನೀಶ್ ಕುಮಾರ್ ಕೆ. ಅವರಿಗೆ ಕೇರಳ–ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರಿನಲ್ಲಿ ಕಳೆದ 16 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಅಭಿಮತ ಚಾನೆಲ್‌ನ ವರದಿಗಾರ ಅನೀಶ್ ಕುಮಾರ್ ಕೆ. ಅವರು ಪ್ರತಿಷ್ಠಿತ ಕೇರಳ–ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ಇದರ ನೇತೃತ್ವದಲ್ಲಿ ನಡೆಯಲಿರುವ ಕೇರಳ ರಾಜ್ಯದ 8ನೇ ಕನ್ನಡ ಸಮ್ಮೇಳನ–2026 ಹಾಗೂ ಕೇರಳ–ಕರ್ನಾಟಕ ಉತ್ಸವದ ಅಂಗವಾಗಿ ನೀಡಲಾಗುವ ಈ ಪ್ರಶಸ್ತಿಗೆ ಅನೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ 8ನೇ ಕನ್ನಡ ಸಮ್ಮೇಳನ–2026, ಕೇರಳ–ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ ನಡೆಯಲಿದೆ. ಇದೇ ಸಂದರ್ಭದಲ್ಲಿ ಕೇರಳ–ಕರ್ನಾಟಕ ಭವನದ ಭೂಮಿಪೂಜೆ ಮತ್ತು ಶಿಲಾನ್ಯಾಸ ಸಮಾರಂಭವೂ ಜರುಗಲಿದೆ.

ನವೆಂಬರ್ 28ರ ಶನಿವಾರ ಬೆಳಗ್ಗೆ 10 ಗಂಟೆಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು, ನವೆಂಬರ್ 29ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅನೀಶ್ ಕುಮಾರ್ ಅವರಿಗೆ ಪ್ರತಿಷ್ಠಿತ ಕೇರಳ–ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ.

ಕಳೆದ 16 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಅನೀಶ್ ಕುಮಾರ್ ಅವರು ದೃಶ್ಯ ಮಾಧ್ಯಮ ವರದಿಗಾರಿಕೆಯಲ್ಲಿ ವಿಶೇಷ ಅನುಭವ ಹೊಂದಿದ್ದಾರೆ. ಸಾವಿರಾರು ಜನಪರ ವರದಿಗಳ ಮೂಲಕ ಪುತ್ತೂರು ಭಾಗದ ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕ ಸಮಸ್ಯೆಗಳು ಹಾಗೂ ಜನರ ಆಶೋತ್ತರಗಳಿಗೆ ಮಾಧ್ಯಮದ ಮೂಲಕ ಧ್ವನಿಯಾಗಿದ್ದಾರೆ.

ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಹಲವು ಗಣ್ಯರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ರಾಜ್ಯಪಾಲರು ಪುತ್ತೂರಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಅವರ ಸಂದರ್ಶನ ಹಾಗೂ ಹೇಳಿಕೆಗಳನ್ನು ಪಡೆದು ವಿವಿಧ ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಜನಪರ ವರದಿಗಾರಿಕೆಯನ್ನು ಗುರುತಿಸಿ ಈ ಹಿಂದೆ ಹಲವು ಸಂಘ-ಸಂಸ್ಥೆಗಳು ಅನೀಶ್ ಕುಮಾರ್ ಅವರನ್ನು ಸನ್ಮಾನಿಸಿವೆ. ಇದೀಗ ಕೇರಳ–ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅವರ ಪತ್ರಿಕೋದ್ಯಮ ಸೇವೆಗೆ ಮತ್ತೊಂದು ಗೌರವವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!