ಪುತ್ತೂರಿನಲ್ಲಿ ಕಳೆದ 16 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಅಭಿಮತ ಚಾನೆಲ್ನ ವರದಿಗಾರ ಅನೀಶ್ ಕುಮಾರ್ ಕೆ. ಅವರು ಪ್ರತಿಷ್ಠಿತ ಕೇರಳ–ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ಇದರ ನೇತೃತ್ವದಲ್ಲಿ ನಡೆಯಲಿರುವ ಕೇರಳ ರಾಜ್ಯದ 8ನೇ ಕನ್ನಡ ಸಮ್ಮೇಳನ–2026 ಹಾಗೂ ಕೇರಳ–ಕರ್ನಾಟಕ ಉತ್ಸವದ ಅಂಗವಾಗಿ ನೀಡಲಾಗುವ ಈ ಪ್ರಶಸ್ತಿಗೆ ಅನೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ 8ನೇ ಕನ್ನಡ ಸಮ್ಮೇಳನ–2026, ಕೇರಳ–ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ ನಡೆಯಲಿದೆ. ಇದೇ ಸಂದರ್ಭದಲ್ಲಿ ಕೇರಳ–ಕರ್ನಾಟಕ ಭವನದ ಭೂಮಿಪೂಜೆ ಮತ್ತು ಶಿಲಾನ್ಯಾಸ ಸಮಾರಂಭವೂ ಜರುಗಲಿದೆ.
ನವೆಂಬರ್ 28ರ ಶನಿವಾರ ಬೆಳಗ್ಗೆ 10 ಗಂಟೆಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು, ನವೆಂಬರ್ 29ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅನೀಶ್ ಕುಮಾರ್ ಅವರಿಗೆ ಪ್ರತಿಷ್ಠಿತ ಕೇರಳ–ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ.
ಕಳೆದ 16 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಅನೀಶ್ ಕುಮಾರ್ ಅವರು ದೃಶ್ಯ ಮಾಧ್ಯಮ ವರದಿಗಾರಿಕೆಯಲ್ಲಿ ವಿಶೇಷ ಅನುಭವ ಹೊಂದಿದ್ದಾರೆ. ಸಾವಿರಾರು ಜನಪರ ವರದಿಗಳ ಮೂಲಕ ಪುತ್ತೂರು ಭಾಗದ ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕ ಸಮಸ್ಯೆಗಳು ಹಾಗೂ ಜನರ ಆಶೋತ್ತರಗಳಿಗೆ ಮಾಧ್ಯಮದ ಮೂಲಕ ಧ್ವನಿಯಾಗಿದ್ದಾರೆ.
ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಹಲವು ಗಣ್ಯರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ರಾಜ್ಯಪಾಲರು ಪುತ್ತೂರಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಅವರ ಸಂದರ್ಶನ ಹಾಗೂ ಹೇಳಿಕೆಗಳನ್ನು ಪಡೆದು ವಿವಿಧ ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಜನಪರ ವರದಿಗಾರಿಕೆಯನ್ನು ಗುರುತಿಸಿ ಈ ಹಿಂದೆ ಹಲವು ಸಂಘ-ಸಂಸ್ಥೆಗಳು ಅನೀಶ್ ಕುಮಾರ್ ಅವರನ್ನು ಸನ್ಮಾನಿಸಿವೆ. ಇದೀಗ ಕೇರಳ–ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅವರ ಪತ್ರಿಕೋದ್ಯಮ ಸೇವೆಗೆ ಮತ್ತೊಂದು ಗೌರವವಾಗಿದೆ.
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…
ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ…
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್…
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ…