ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿದ್ದ ಮಾಜಿ ಸಂಸದ ಸಜ್ಜನ ರಾಜಕಾರಣಿ ದಿ. ದ್ರುವನಾರಾಯಣ್ ಅವರ 62 ನೇ ಹುಟ್ಟುಹಬ್ಬ ಪುತ್ತೂರಿನ ಅಭಿಮಾನಿಗಳಿಂದ ಅಗಸ್ಟ್ 5 ಶನಿವಾರ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ. ಬೆಳಗ್ಗೆ ಪ್ರಜ್ಞಾ ಸಲಹಾ ಕೇಂದ್ರದಲ್ಲಿ ಬಟ್ಟೆ ವಿತರಣೆ. ಬಳಿಕ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರಕ್ತದಾನ ಶಿಬಿರ ಮತ್ತು ಸಭಾ ಕಾರ್ಯಕ್ರನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಅತೀ ಕಿರಿಯ ಶಾಸಕರಾಗಿರುವ ದರ್ಶನ್ ದ್ರುವನಾರಾಯಣ್ ರವರು ಪುತ್ತೂರಿಗೆ ಬರುತ್ತಿದ್ದಾರೆ. ಕ್ಷೇತ್ರದ ಶಾಸಕರು ಆಶೋಕ್ ಕುಮಾರ್ ರೈ ಕೋಡಿಂಬಾಡಿ, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಕಾವು ಹೇಮನಾಥ್ ಶೆಟ್ಟಿ ಮೊದಲಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…