ಮಂಗಳೂರು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರು ಗುರುವಾರ, ನ.19ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಅಧಿಕಾರ ವಹಿಸಿಕೊಂಡ ನೂತನ ಐಜಿಪಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಪಶ್ಚಿಮ ವಲಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಜನಸ್ನೇಹಿ ಪೊಲೀಸ್ ವ್ಯವಸ್ಥೆ ಬಲಪಡಿಸುವುದರ ಜತೆಗೆ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.



