ಸಹಕಾರಿ ಕ್ಷೇತ್ರದ ಮೂಲಕ ಜಾತಿ, ಮತ ಭೇದವಿಲ್ಲದೆ ಜನರಿಗೆ ನೆರವು ನೀಡಲು ಸಾಧ್ಯ. ಗ್ರಾಮೀಣ ಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಸದೃಢಗೊಳಿಸಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಅವರು, ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ತಳಮಟ್ಟದ ಸಂಘಟನೆಗೆ ಪ್ರಮುಖ ಆಧಾರವಾಗಿವೆ ಎಂದರು.
ಸಹಕಾರಿ ಸಂಘಗಳಿಲ್ಲದ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಸದಸ್ಯತ್ವ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಸಂಪೂರ್ಣ ಬದ್ಧನಾಗಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…
ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ…
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್…
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ…