ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಲಾದ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ದೊರೆತಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ವಿವೇಕಾನಂದ ಸಾಲಿನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದರೂ, ವಾಸ್ತವದಲ್ಲಿ ಅದಕ್ಕೆ ಪೂರಕವಾದ ವಾತಾವರಣ ಇಲ್ಲ ಎಂದು ಅವರು ಆರೋಪಿಸಿದ್ದಾರೆ.
ಪ್ರವಾಸೋದ್ಯಮ ಯೋಜನೆಗಳಿಗೆ ಅನುಮತಿ ಪಡೆಯಲು ಹಲವು ಇಲಾಖೆಗಳ ಕ್ಲಿಯರೆನ್ಸ್ ಅಗತ್ಯವಿದ್ದು, ಇದಕ್ಕಾಗಿ ತಿಂಗಳುಗಟ್ಟಲೆ ಸರಕಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಇಂತಹ ವಿಳಂಬದಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಅವರು ದೂರಿದ್ದಾರೆ.



