ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧರ್ಮಸ್ಥಳದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಇಂದು ಬೆಳ್ತಂಗಡಿಯ ಉಜಿರೆ ಸಮೀಪ ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ಕ್ಷೇತ್ರದ ಬಗ್ಗೆ ಅವಹೇಳನ ಮಾಡಲಾಗ್ತಿದೆ ಎಂದು ಆರೋಪಿಸಿ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಪರ ಧರ್ಮಸ್ಥಳದ ಭಕ್ತರ ಹೆಸರಿನಲ್ಲಿ ಪ್ರತಿಭಟನೆ ಆಯೋಜನೆಯಾಗಿತ್ತು. ಈ ಪ್ರತಿಭಟನೆಯಲ್ಲಿ ಸಂತ್ರಸ್ತ ಸೌಜನ್ಯ ಕುಟುಂಬಸ್ಥರು ಪಾಲ್ಗೊಂಡಿದ್ದರು. ಈ ವೇಳೆ ಹೆಗ್ಗಡೆ ಪರವಾಗಿ ಪ್ರತಿಭಟಿಸುತ್ತಿದ್ದ ವ್ಯಕ್ತಿಯೊರ್ವ ಸೌಜನ್ಯಳ ತಮ್ಮನ ಕಾಲರ್ ಪಟ್ಟಿ ಹಿಡಿದು, ಹಲ್ಲೆಗೆ ಯತ್ನಿಸಿದ್ದಾನೆ.
ಸೌಜನ್ಯ ಕುಟುಂಬಸ್ಥರು ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಂತೆ ಪ್ರತಿಭಟನಾಕಾರರು ಅವರನ್ನು ಸುತ್ತುವರೆದು, ಅವರ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಬಿಳಿ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯೊರ್ವ ಸೌಜನ್ಯಳ ತಮ್ಮ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದು, ಅಲ್ಲೇ ಇದ್ದ ಪೊಲೀಸರು ಆತನನ್ನು ತಡೆದಿದ್ದಾರೆ. ಧರ್ಮದ ನಾಡಿನಲ್ಲಿ ಇಂತಹ ಕೃತ್ಯ ಎಷ್ಟರ ಮಟ್ಟಿಗೆ ಸರಿ, ಅಮಾಯಕಳಾದ ಸೌಜನ್ಯಗೆ ನ್ಯಾಯ ಒದಗಿಸಿ ಕೊಡಿ ಎಂಬ ಕೂಗು ಕೆಲ ಬುದ್ಧಿಮಾಂದ್ಯರಿಗೆ ತಪ್ಪಾಗಿ ಕಾಣಿಸುತ್ತಿದ್ದಿಯಾ?.. ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಪಟ್ಟವರು ತಪ್ಪು ಮಾಡಿಲ್ಲ, ಹಾಗಾದರೆ ಅವರ ಅಧಿಕಾರನ್ನು ಉಪಯೋಗಿಸಿಕೊಂಡು ಅವರ ಊರಿನ ಹೆಣ್ಣು ಮಗಳಿಗೆ ನ್ಯಾಯ ಒದಗಿಸಲಿ ಅವತ್ತು ಧರ್ಮಾಧಿಕಾರಿಗಳಿಗಳನ್ನು ದೂರುತ್ತಿರುವವರೇ ಅವರನ್ನು ಮೆಚ್ಚಿ ಆರಾಧಿಸ್ತಾರೆ ಎಂಬುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತು.
ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ಆಥವಾ ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಜೊತೆಗೆ ಸೌಜನ್ಯಳಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆ ನಡೆದಿತ್ತು. ಆದರೆ ಇಲ್ಲಿ ಸಂತ್ರಸ್ತಳ ಕುಟುಂಬದ ವಿರುದ್ಧ ಪ್ರತಿಭಟನೆ ನಡೆದ ಆಗಿತ್ತು. ಎಂಬುವುದು ನೆಟ್ಟಿಗರ ಅಭಿಪ್ರಾಯವಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…