ಯೆನೆಪೋಯ ವಿಶ್ವವಿದ್ಯಾಲಯದ ಘಟಕ ಸಂಸ್ಥೆಯಾದ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಚಟುವಟಿಕೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕರ್ನಾಟಕ ಸರ್ಕಾರದ ರಾಜ್ಯಮಟ್ಟದ ಎನ್ಎಸ್ಎಸ್ ಪ್ರಶಸ್ತಿಗೆ ಕಾಲೇಜಿನ ಒಬ್ಬ ಅಧ್ಯಾಪಕಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಾಲೇಜಿನ ಎನ್ಎಸ್ಎಸ್ ಘಟಕಕ್ಕೂ ಪ್ರಶಸ್ತಿ ಲಭಿಸಿದೆ. ಈ ಮೂಲಕ ಸಂಸ್ಥೆ ಒಟ್ಟು ನಾಲ್ಕು ರಾಜ್ಯಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
2023–24ನೇ ಸಾಲಿನ ಅತ್ಯುತ್ತಮ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಕೊಲಿನ್ ಜಾನೆಟ್ ಆಯ್ಕೆಯಾಗಿದ್ದಾರೆ. ಇದೇ ಸಾಲಿನ ಅತ್ಯುತ್ತಮ ಎನ್ಎಸ್ಎಸ್ ಸ್ವಯಂಸೇವಕ ಪ್ರಶಸ್ತಿಯನ್ನು ವಿದ್ಯಾರ್ಥಿ ಶ್ರೀಜನ್ ಬಿ.ಸಿ. ಪಡೆದುಕೊಂಡಿದ್ದಾರೆ.
2024–25ನೇ ಸಾಲಿನ ಅತ್ಯುತ್ತಮ ಎನ್ಎಸ್ಎಸ್ ಸ್ವಯಂಸೇವಕಿ ಪ್ರಶಸ್ತಿಗೆ ವಿದ್ಯಾರ್ಥಿನಿ ಸಾನಿಯಾ ಕೆ. ಆಯ್ಕೆಯಾಗಿದ್ದು, ಕಾಲೇಜಿನ ಎನ್ಎಸ್ಎಸ್ ಘಟಕಕ್ಕೂ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ಈ ಸಾಧನೆಯ ಮೂಲಕ ಕಾಲೇಜು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…