ರಸ್ತೆಯಲ್ಲಿ ಸಿಕ್ಕ ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ತಮ್ಮ ಬಳಿಯೇ ಇಟ್ಟುಕೊಳ್ಳದೆ, ಅದರ ವಾರಸುದಾರರನ್ನು ಪತ್ತೆಹಚ್ಚಿ ಹಿಂದಿರುಗಿಸುವ ಮೂಲಕ ಬಂಟ್ವಾಳ ಪೊಲೀಸರಿಬ್ಬರು ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದಿದ್ದಾರೆ.
ಅಮ್ಟಾಡಿ ಗ್ರಾಮದ ಗ್ಲೆವಿನ್ ಎಲೆಕ್ಟ್ರಿಕಲ್ಸ್ ಮಾಲೀಕ ರೋನಿ ಡಿಸೋಜಾ ಅವರು ನವೆಂಬರ್ 4ರಂದು ಬಿ.ಸಿ.ರೋಡ್ನಲ್ಲಿ ಸುಮಾರು 45 ಗ್ರಾಂ ತೂಕದ, ಅಂದಾಜು ಐದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ.
ಅದೇ ದಿನ ಬಂಟ್ವಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಕೃಷ್ಣ ನಾಯಕ್ ಅವರು ರೌಡಿ ಸ್ಕ್ವಾಡ್ ಕರ್ತವ್ಯದಲ್ಲಿದ್ದಾಗ ಬಿ.ಸಿ.ರೋಡ್ನಲ್ಲಿ ಚಿನ್ನದ ಸರ ಪತ್ತೆಯಾಗಿತ್ತು. ಈ ವಿಚಾರವನ್ನು ಅವರು ಹೆಡ್ ಕಾನ್ಸ್ಟೆಬಲ್ ಸುರೇಶ್ ಅವರ ಗಮನಕ್ಕೆ ತಂದಿದ್ದರು.
ಬಳಿಕ ರೋನಿ ಡಿಸೋಜಾ ಅವರು ಅನಿರೀಕ್ಷಿತವಾಗಿ ಸುರೇಶ್ ಅವರನ್ನು ಸಂಪರ್ಕಿಸಿದಾಗ ಚಿನ್ನದ ಸರ ಕಳೆದುಕೊಂಡಿರುವ ವಿಚಾರ ತಿಳಿದುಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಕೃಷ್ಣ ನಾಯಕ್ ಮತ್ತು ಸುರೇಶ್ ಅವರು ಪತ್ತೆಯಾಗಿದ್ದ ಚಿನ್ನದ ಸರವನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.
ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಸರ ಮರಳಿ ದೊರೆತ ಸಂತಸದಲ್ಲಿ ರೋನಿ ಡಿಸೋಜಾ ಅವರು ಪೊಲೀಸರ ಪ್ರಾಮಾಣಿಕ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…