ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಇದೀಗ ದುಷ್ಕರ್ಮಿಗಳು ಧಾರ್ಮಿಕ ಕೇಂದ್ರವನ್ನೇ ಗುರಿಯಾಗಿಸಿಕೊಂಡಿದ್ದಾರೆ. ವಾಮಂಜೂರು ಅಬಕಾರಿ ತಪಾಸಣಾ ಕೇಂದ್ರದ ಹಿಂಭಾಗದಲ್ಲಿರುವ ಕಡವತ್ ದರ್ಗಾ ಶರೀಫ್ ಮಸೀದಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ದೋಚಿದ್ದಾರೆ.
ಶುಕ್ರವಾರ ರಾತ್ರಿ ಸುಮಾರು 10 ಗಂಟೆಗೆ ಮಸೀದಿಗೆ ಬೀಗ ಹಾಕಲಾಗಿತ್ತು. ಶನಿವಾರ ಬೆಳಗ್ಗೆ ಬಂದು ನೋಡಿದಾಗ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಒಳಗೆ ಪರಿಶೀಲಿಸಿದಾಗ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಡಬ್ಬಿಯಲ್ಲಿ ಸುಮಾರು 15ರಿಂದ 20 ಸಾವಿರ ರೂ. ಹಣವಿತ್ತು ಎಂದು ಅಂದಾಜಿಸಲಾಗಿದೆ.
ಕಳ್ಳತನದ ಮಾಹಿತಿ ತಿಳಿಯುತ್ತಿದ್ದಂತೆ ಎಎಸ್ಪಿ ಅಚ್ಚುತ ಅಶೋಕ್ ಹಾಗೂ ಮಂಜೇಶ್ವರ ಠಾಣಾಧಿಕಾರಿ ನೇತೃತ್ವದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…