ಬೈಕ್ಗೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮರ್ಣೆ ಗ್ರಾಮದ ಅಜೆಕಾರು ದೊಡ್ಡಪಲ್ಕೆ ಕ್ರಾಸ್ ಬಳಿ ನವೆಂಬರ್ 21ರ ರಾತ್ರಿ ನಡೆದಿದೆ. ಅಜೆಕಾರು ಬೊಂಡುಕುಮೇರಿ ನಿವಾಸಿ ಲೋಕೇಶ್ ಕುಲಾಲ್ (ಮೃತರು) ಮೃತ ಬೈಕ್ ಸವಾರ.

ನವೆಂಬರ್ 21ರಂದು ರಾತ್ರಿ ಸುಮಾರು 9 ಗಂಟೆಗೆ ಲೋಕೇಶ್ ಅವರು ಬೈಕ್ನಲ್ಲಿ ಅಜೆಕಾರಿನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ದೊಡ್ಡಪಲ್ಕೆ ಕ್ರಾಸ್ ಬಳಿ ಎದುರಿನಿಂದ ಅಜೆಕಾರು ಕಡೆಗೆ ಅತಿವೇಗವಾಗಿ ಬರುತ್ತಿದ್ದ ಕ್ರೇನ್ ರಸ್ತೆ ಬಲಬದಿಗೆ ಬಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲೋಕೇಶ್ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಅಪಘಾತದ ಬಳಿಕ ಕ್ರೇನ್ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇದೇ ರಸ್ತೆಯಲ್ಲಿ ಬಂದ ಲೋಕೇಶ್ ಅವರ ಪರಿಚಯಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



