ಕರಾವಳಿ

ಮಂಗಳೂರು: ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಸಿನಿಮಾದ ಟೀಸರ್ ಬಿಡುಗಡೆ; ಜ.15ಕ್ಕೆ ಚಿತ್ರ ತೆರೆಗೆ

ನವದುರ್ಗ ಫಿಲ್ಮ್ಸ್ ಲಾಂಛನದಲ್ಲಿ ಕರಾವಳಿ ಮೂಲದ ಉದ್ಯಮಿ ಡಾ. ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದ, ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಭಾರತ್ ಮಾಲ್‌ನ ಭಾರತ್ ಸಿನಿಮಾಸ್‌ನಲ್ಲಿ ನಡೆಯಿತು.

ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಚಿತ್ರದ ಟೀಸರ್ ಹಾಗೂ ಹಾಡಿನ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಣದ ಮೇಲುಸ್ತುವಾರಿ ವಹಿಸಿದ್ದ ಹಾಗೂ ಅಭಿಮತ ಟಿವಿಯ ಮುಖ್ಯಸ್ಥೆ ಡಾ. ಮಮತಾ ಪಿ. ಶೆಟ್ಟಿ, ನಿರ್ಮಾಪಕರು ಕಲಾವಿದರಿಗೆ ಅನ್ನದಾತರು. 54 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆದಿದ್ದು, ನಿರ್ಮಾಪಕರು ಚಿತ್ರತಂಡಕ್ಕೆ ಯಾವುದೇ ಕೊರತೆಯಾಗದಂತೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದರು.

ಸಮಾಜಸೇವೆಯ ಜೊತೆಗೆ ಸಿನಿಮಾ ಕ್ಷೇತ್ರದ ಬಗ್ಗೆಯೂ ಕಾಳಜಿ ಹೊಂದಿರುವ ಡಾ. ಕನ್ಯಾನ ಸದಾಶಿವ ಶೆಟ್ಟಿ, ಕಲಾವಿದರು ಹಾಗೂ ತೆರೆಯ ಹಿಂದಿನ ಶ್ರಮಜೀವಿಗಳಿಗೆ ಆಸರೆಯಾಗುವ ಉದ್ದೇಶದಿಂದ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ಉತ್ತಮ ಕಥೆ ಹೇಳಿದ ಹಿನ್ನೆಲೆಯಲ್ಲಿ ಚಿತ್ರ ನಿರ್ಮಾಣಕ್ಕೆ ಮುಂದಾದರು. ನಿರ್ದೇಶಕರು ನಾಲ್ಕು ವರ್ಷಗಳಿಂದ ನಿರ್ಮಾಪಕರಿಗಾಗಿ ಕಾಯುತ್ತಿದ್ದರು. ಈ ಚಿತ್ರದ ಮೂಲಕ ಅವರ ಪ್ರಯತ್ನಕ್ಕೆ ಫಲ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು.

ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ಮಾತನಾಡಿ, ಈವರೆಗೆ ನಾಲ್ಕು ಚಿತ್ರಗಳನ್ನು ನಿರ್ದೇಶಿಸಿದ್ದು, ಉತ್ತಮ ಕಥೆಯನ್ನು ಸಿನಿಮಾ ಮಾಡುವ ಪ್ರಯತ್ನದಲ್ಲಿದ್ದಾಗ ಆಕಸ್ಮಿಕವಾಗಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಅವರ ಪರಿಚಯವಾಯಿತು. ಅವರಿಗೆ ಕಥೆ ಇಷ್ಟವಾದ ಬಳಿಕ ಸಿನಿಮಾ ನಿರ್ಮಾಣ ಸಾಧ್ಯವಾಯಿತು. ಜನವರಿ 15ರಂದು ಚಿತ್ರ ತೆರೆಗೆ ಬರಲಿದ್ದು, ಕುಟುಂಬ ಸಮೇತ ಕುಳಿತು ನೋಡಬಹುದಾದ ಹಾಸ್ಯಮಯ ಚಿತ್ರವನ್ನು ರೂಪಿಸಲಾಗಿದೆ. ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಎಂದರು.

ಮುಖ್ಯ ಅತಿಥಿ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ಚಿತ್ರದ ಟೀಸರ್ ಹಾಗೂ ಹಾಡು ಉತ್ತಮವಾಗಿ ಮೂಡಿಬಂದಿವೆ. ಇಸ್ಮಾಯಿಲ್ ಅವರ ಕನ್ನಡದ ಎರಡನೇ ನಿರ್ದೇಶನದ ಚಿತ್ರವೂ ಜನರ ಮನಗೆಲ್ಲಲಿ ಎಂದು ಹಾರೈಸಿದರು. ಪಣಂಬೂರು ಠಾಣೆಯ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ವಲಾಲ್ ಚಿತ್ರದ ಟೀಸರ್‌ನ ಗುಣಮಟ್ಟವನ್ನು ಮೆಚ್ಚಿ, ನಿರ್ದೇಶಕ ಹಾಗೂ ನಿರ್ಮಾಪಕರು ಉತ್ತಮ ಸಿನಿಮಾ ನೀಡಿದ್ದಾರೆ ಎಂದರು. ನ್ಯಾಯವಾದಿ ಅರುಣ್ ಬಂಗೇರ ಕೂಡ ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಚಿತ್ರದಲ್ಲಿ ದೀಪಕ್ ರೈ ಪಾಣಾಜೆ, ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ, ರಿದಾನ್ ಶೆಟ್ಟಿ, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ರವಿರಾಮಕುಂಜ, ಪುಷ್ಪರಾಜ ಬೊಳ್ಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಮೈಮ್ ರಾಮ್ ದಾಸ್, ಉಮೇಶ್ ಮಿಜಾರ್, ಅನಿಲ್ ರಾಜ್ ಉಪ್ಪಳ, ಮಾನಸಿ ಸುಧೀರ್, ಸಾಯಿಕೃಷ್ಣ ಹಾಗೂ ಸತೀಶ್ ಬಂದಲೆ ಸೇರಿದಂತೆ ಕರಾವಳಿಯ ಹಲವು ಕಲಾವಿದರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಮಣಿಕಾಂತ್ ಕದ್ರಿ ಮತ್ತು ಸಮೀರ್ ಮುಡಿಪು ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಹಾಡೊಂದರ ಚಿತ್ರೀಕರಣಕ್ಕೆ ಒಂದು ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ರಿಕ್ಷಾ ಚಾಲಕರು ಅಸಹಾಯಕತೆಯ ಸಂಕೇತವಲ್ಲ, ಸ್ವಾಭಿಮಾನಿಗಳು ಎಂಬ ಕಥಾಹಂದರವನ್ನು ಚಿತ್ರ ಹೊಂದಿದೆ. ಹೊಸ ಕಲಾವಿದರಿಗೂ ಅವಕಾಶ ನೀಡಲಾಗಿದ್ದು, ಅಖಿಲ ಕರ್ನಾಟಕ ಆಟೋ ರಿಕ್ಷಾ ಚಾಲಕರಿಗೆ ಚಿತ್ರವನ್ನು ಅರ್ಪಿಸಲಾಗಿದೆ ಎಂದು ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ಲಕ್ಷ್ಮಣ್, ಅಡ್ಯಾರ್ ಮಾಧವ ನಾಯ್ಕ್, ಪಮ್ಮಿ ಕೊಡಿಯಾಲ್ ಬೈಲ್, ಡಾ. ಅಬೂಬಕರ್ ಸಿದ್ದಿಕ್ ಅಡ್ಡೂರು, ಡಾ. ಕಿರಣ್ ಕುಮಾರ್, ಎನ್. ನಾಗರಾಜ್, ಶರಣ್ ರಾಜ್ ಕಾಸರಗೋಡು, ನಿತಿನ್ ರೈ ಕುಕ್ಕುವಳ್ಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಎ.ಕೆ. ಕಾರ್ಲ ಚಿತ್ರ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಷಷ್ಠೀಶ್ ಪಿ. ಶೆಟ್ಟಿ ಸ್ವಾಗತಿಸಿದರು. ವಿಜೆ ವಿಖ್ಯಾತ್ ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…

55 mins ago

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…

56 mins ago

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ…

57 mins ago

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ…

1 day ago

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್…

1 day ago

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ…

1 day ago