ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ನಶಾಮುಕ್ತ ಕರ್ನಾಟಕ ಹಾಗೂ ನಶಾಮುಕ್ತ ಭಾರತ ನಿರ್ಮಾಣದಲ್ಲಿ ಕಾನೂನಿನ ಪಾತ್ರದಷ್ಟೇ ಸಮಾಜದ ಜವಾಬ್ದಾರಿಯೂ ಮಹತ್ವದ್ದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಭೂಮರೆಡ್ಡಿ ಹೇಳಿದರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಮತ್ತು ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಜಂಟಿ ಆಶ್ರಯದಲ್ಲಿ ಮಂಗಳವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಮಾದಕ ಪದಾರ್ಥಗಳ ಪೂರೈಕೆ ಮತ್ತು ಸೇವನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕೈಗೊಂಡ ಕಾನೂನು ಕ್ರಮಗಳ ಅಂಕಿಅಂಶಗಳನ್ನು ಸಭೆಯ ಮುಂದಿಟ್ಟರು.

ಜಾಗೃತಿ ಉಪನ್ಯಾಸ ನೀಡಿದ ಕಕ್ಕಿಂಜೆ ಮುಹಿಯುದ್ದೀನ್ ಜುಮಾ ಮಸೀದಿಯ ಮುದರ್ರಿಸ್ ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಪ್ರತಿಯೊಂದು ಜಮಾಅತ್‌ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ನಿರಂತರ ಅರಿವು ಮೂಡಿಸಬೇಕು ಎಂದು ಹೇಳಿದರು. ಇದೇ ವೇಳೆ ನಶಾಮುಕ್ತ ಸಮಾಜ ನಿರ್ಮಾಣದ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿಯ ಕೋಶಾಧಿಕಾರಿ ಪಿ.ಎಸ್. ಅಬ್ದುಲ್ ಹಮೀದ್ ಹಾಜಿ ನೆಹರುನಗರ ಹಾಗೂ ಜಮೀಯ್ಯತುಲ್ ಫಲಾಹ್ ಕೋಶಾಧಿಕಾರಿ ಲತೀಫ್ ನೇರಳಕಟ್ಟೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಮಂಗಳೂರು: ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಸಿನಿಮಾದ ಟೀಸರ್ ಬಿಡುಗಡೆ; ಜ.15ಕ್ಕೆ ಚಿತ್ರ ತೆರೆಗೆ

error: Content is protected !!