ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್ ಒಡೆದು ಸುಮಾರು 50 ಸಾವಿರ ರೂಪಾಯಿ ನಗದು ಕಳವು ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮಸೀದಿ ಅಧ್ಯಕ್ಷ ಆರ್.ಕೆ. ಬಾವ ಹಾಜಿ ಅವರು ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆದ ಐದನೇ ಕಳ್ಳತನ ಇದಾಗಿದೆ. ಇತ್ತೀಚೆಗಷ್ಟೇ ವಾಮಂಜೂರಿನ ಮಖಾಂನಲ್ಲಿ ಇರಿಸಲಾಗಿದ್ದ ಕಾಣಿಕೆ ಡಬ್ಬಿಯನ್ನೂ ಕಳ್ಳರು ಕದ್ದೊಯ್ದಿದ್ದರು.
ನಿರಂತರವಾಗಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳು ಸ್ಥಳೀಯ ಭಕ್ತರು ಹಾಗೂ ಧಾರ್ಮಿಕ ಕೇಂದ್ರಗಳ ಆಡಳಿತ ಮಂಡಳಿಗಳಲ್ಲಿ ಆತಂಕ ಮೂಡಿಸಿವೆ.
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…
ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ…
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ…
ನಶಾಮುಕ್ತ ಕರ್ನಾಟಕ ಹಾಗೂ ನಶಾಮುಕ್ತ ಭಾರತ ನಿರ್ಮಾಣದಲ್ಲಿ ಕಾನೂನಿನ ಪಾತ್ರದಷ್ಟೇ ಸಮಾಜದ ಜವಾಬ್ದಾರಿಯೂ ಮಹತ್ವದ್ದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ…