ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆ ಸೇತುವೆಯಲ್ಲಿ ಎರಡು ತಿಂಗಳ ಹಿಂದೆ ನೆಲಕ್ಕುರುಳಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ ಮರುಜೋಡಣೆ ಮಾಡಿದೆ. ಬುಧವಾರ ಕ್ರೇನ್ ಸಹಾಯದಿಂದ ಕಮಾನು ಅಳವಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ.
ಈ ಕಾರ್ಯಕ್ಕೆ ಪುರಸಭೆಯ ನಿಕಟಪೂರ್ವ ಸದಸ್ಯ ಇದ್ರೀಸ್ ಪಿ.ಜೆ. ಸೇರಿದಂತೆ ಸ್ಥಳೀಯರು ಸಹಕರಿಸಿದ್ದಾರೆ.
ನೇತ್ರಾವತಿ ನದಿಯ ಹಳೆ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸುವ ಉದ್ದೇಶದಿಂದ ಸೇತುವೆಯ ಎರಡೂ ಬದಿಗಳಲ್ಲಿ ಕಬ್ಬಿಣದ ಕಮಾನುಗಳನ್ನು ಅಳವಡಿಸಲಾಗಿತ್ತು. ಆದರೆ, ಸೆಪ್ಟೆಂಬರ್ 3ರಂದು ಗೂಡಿನಬಳಿ ಕಡೆಯ ಕಮಾನು ನೆಲಕ್ಕುರುಳಿದ್ದರಿಂದ ವಾಹನ ಸವಾರರು ಗೊಂದಲ ಹಾಗೂ ತೊಂದರೆ ಅನುಭವಿಸುವಂತಾಗಿತ್ತು.
ಇದೀಗ ಕಮಾನು ಮರುಜೋಡಣೆಯಾಗಿರುವುದರಿಂದ ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧಿಸುವ ವ್ಯವಸ್ಥೆ ಪುನಃ ಕಾರ್ಯಾರಂಭಿಸಿದೆ.
ಪೊಲೀಸರ ಕರ್ತವ್ಯದಲ್ಲಿ ಒತ್ತಡ ಸಹಜವಾಗಿದ್ದು, ಅದನ್ನು ನಿವಾರಿಸಿಕೊಳ್ಳಲು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ. ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜತೆಗೆ…
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಆನ್ಲೈನ್ ಹಾಗೂ ಡಿಜಿಟಲ್ ಹಣಕಾಸು ವಂಚನೆ ಪ್ರಕರಣಗಳ ತನಿಖೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಲ್ಲಿದ್ದ ದಕ್ಷಿಣ…
ಉಪ್ಪಿನಂಗಡಿ ಬಳಿ ನೂತನ ಟೋಲ್ಗೇಟ್ ಆರಂಭಿಸಿರುವುದನ್ನು ವಿರೋಧಿಸಿ ಎಸ್ಡಿಪಿಐ ಕಾರ್ಯಕರ್ತರು ಗುರುವಾರ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ಗೇಟ್ಗೆ ಮುತ್ತಿಗೆ ಹಾಕಿ…
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಚನಾ ಫಲಕ ಹಾಗೂ ಪಾರ್ಕಿಂಗ್ ಲೈಟ್ ಅಳವಡಿಸದೆ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು…
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…