ಉಪ್ಪಿನಂಗಡಿ ಬಳಿ ನೂತನ ಟೋಲ್ಗೇಟ್ ಆರಂಭಿಸಿರುವುದನ್ನು ವಿರೋಧಿಸಿ ಎಸ್ಡಿಪಿಐ ಕಾರ್ಯಕರ್ತರು ಗುರುವಾರ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ಗೇಟ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನಾಕಾರರು ಟೋಲ್ ಸಂಗ್ರಹಕ್ಕೆ ಅಡ್ಡಿಪಡಿಸಿ, ವಾಹನಗಳು ಶುಲ್ಕ ಪಾವತಿಸದೆ ತೆರಳಲು ಅವಕಾಶ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, ಟೋಲ್ಗೇಟ್ನ ಕ್ಯಾಮೆರಾಗಳಿಗೆ ಹಾನಿ ಮಾಡಿರುವುದು, ಸಿಬ್ಬಂದಿಗೆ ಬೆದರಿಕೆ ಹಾಕಿರುವುದು ಹಾಗೂ ಬೂಮ್ ಬ್ಯಾರಿಯರ್ಗಳನ್ನು ಕಿತ್ತುಹಾಕಿರುವ ಆರೋಪವೂ ಕೇಳಿಬಂದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಬಂಟ್ವಾಳ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಪೊಲೀಸರ ಕರ್ತವ್ಯದಲ್ಲಿ ಒತ್ತಡ ಸಹಜವಾಗಿದ್ದು, ಅದನ್ನು ನಿವಾರಿಸಿಕೊಳ್ಳಲು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ. ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜತೆಗೆ…
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಆನ್ಲೈನ್ ಹಾಗೂ ಡಿಜಿಟಲ್ ಹಣಕಾಸು ವಂಚನೆ ಪ್ರಕರಣಗಳ ತನಿಖೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಲ್ಲಿದ್ದ ದಕ್ಷಿಣ…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆ ಸೇತುವೆಯಲ್ಲಿ ಎರಡು ತಿಂಗಳ ಹಿಂದೆ ನೆಲಕ್ಕುರುಳಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ ಮರುಜೋಡಣೆ ಮಾಡಿದೆ.…
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಚನಾ ಫಲಕ ಹಾಗೂ ಪಾರ್ಕಿಂಗ್ ಲೈಟ್ ಅಳವಡಿಸದೆ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು…
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…