ಕರಾವಳಿ

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಾಗೂ ಡಿಜಿಟಲ್ ಹಣಕಾಸು ವಂಚನೆ ಪ್ರಕರಣಗಳ ತನಿಖೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮಾಂತರ ಸೈಬರ್ ಅಪರಾಧ ಪೊಲೀಸ್ ಠಾಣೆಯನ್ನು ಬಂಟ್ವಾಳಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭಗೊಂಡಿದೆ.

ಬಿ.ಸಿ.ರೋಡ್‌ನ ಬಂಟ್ವಾಳ ನಗರ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಬ್ರಿಟಿಷರ ಕಾಲದ ಹಳೆಯ ಜೈಲು ಕಟ್ಟಡವನ್ನು ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಿ ಸೈಬರ್ ಪೊಲೀಸ್ ಠಾಣೆಯನ್ನಾಗಿ ಪರಿವರ್ತಿಸಲಾಗಿದೆ. ಡಿವೈಎಸ್ಪಿ, ಇನ್ಸ್‌ಪೆಕ್ಟರ್, ಪಿಎಸ್‌ಐ ಹಾಗೂ ಸಿಬ್ಬಂದಿಗೆ ಪ್ರತ್ಯೇಕ ಕೊಠಡಿಗಳನ್ನು ನಿರ್ಮಿಸುವುದರ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ.

ಸದ್ಯ ಠಾಣೆಗೆ ಸಿಬ್ಬಂದಿ ಹಾಗೂ ಅಗತ್ಯ ಪರಿಕರಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಠಾಣೆ ಕಾರ್ಯಾರಂಭಿಸಿದ ಬಳಿಕ ಸುಳ್ಯ ಸೇರಿದಂತೆ ಜಿಲ್ಲೆಯ ದೂರದ ಗ್ರಾಮಾಂತರ ಪ್ರದೇಶಗಳ ಜನರು ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಮಂಗಳೂರಿಗೆ ತೆರಳುವ ಅನಿವಾರ್ಯತೆ ತಪ್ಪಲಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸೈಬರ್ ಪೊಲೀಸ್ ಸೇವೆ ಸ್ಥಳೀಯವಾಗಿಯೇ ಲಭ್ಯವಾಗಲಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಪೊಲೀಸರ ಕರ್ತವ್ಯದಲ್ಲಿ ಒತ್ತಡ ಸಹಜವಾಗಿದ್ದು, ಅದನ್ನು ನಿವಾರಿಸಿಕೊಳ್ಳಲು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ. ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜತೆಗೆ…

3 hours ago

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಉಪ್ಪಿನಂಗಡಿ ಬಳಿ ನೂತನ ಟೋಲ್‌ಗೇಟ್ ಆರಂಭಿಸಿರುವುದನ್ನು ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಗುರುವಾರ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಿ…

3 hours ago

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆ ಸೇತುವೆಯಲ್ಲಿ ಎರಡು ತಿಂಗಳ ಹಿಂದೆ ನೆಲಕ್ಕುರುಳಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ ಮರುಜೋಡಣೆ ಮಾಡಿದೆ.…

3 hours ago

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಚನಾ ಫಲಕ ಹಾಗೂ ಪಾರ್ಕಿಂಗ್ ಲೈಟ್ ಅಳವಡಿಸದೆ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು…

3 hours ago

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…

1 day ago

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…

1 day ago