ಪೊಲೀಸರ ಕರ್ತವ್ಯದಲ್ಲಿ ಒತ್ತಡ ಸಹಜವಾಗಿದ್ದು, ಅದನ್ನು ನಿವಾರಿಸಿಕೊಳ್ಳಲು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ. ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜತೆಗೆ ಪರಸ್ಪರ ಭಾತೃತ್ವದ ಭಾವನೆಯೂ ಬೆಳೆಯುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ–2026 ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜತೆಗೆ ಜನರಿಗೆ ರಕ್ಷಣೆ ಒದಗಿಸುವ ಜವಾಬ್ದಾರಿಯೂ ಪೊಲೀಸರ ಮೇಲಿದೆ. ಆದ್ದರಿಂದ ಪೊಲೀಸರು ಸೇವಾ ಮನೋಭಾವದಿಂದ ಹಾಗೂ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಹಾಗೂ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಪಟು ಶ್ರುತಿ ಪಿ. ಶೆಟ್ಟಿ ಉಪಸ್ಥಿತರಿದ್ದರು.
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಾಗೂ ಡಿಜಿಟಲ್ ಹಣಕಾಸು ವಂಚನೆ ಪ್ರಕರಣಗಳ ತನಿಖೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಲ್ಲಿದ್ದ ದಕ್ಷಿಣ…
ಉಪ್ಪಿನಂಗಡಿ ಬಳಿ ನೂತನ ಟೋಲ್‌ಗೇಟ್ ಆರಂಭಿಸಿರುವುದನ್ನು ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಗುರುವಾರ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಿ…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆ ಸೇತುವೆಯಲ್ಲಿ ಎರಡು ತಿಂಗಳ ಹಿಂದೆ ನೆಲಕ್ಕುರುಳಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ ಮರುಜೋಡಣೆ ಮಾಡಿದೆ.…
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಚನಾ ಫಲಕ ಹಾಗೂ ಪಾರ್ಕಿಂಗ್ ಲೈಟ್ ಅಳವಡಿಸದೆ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು…
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು…
ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ…