ಕಾಸರಗೋಡು ನಗರಸಭೆಯ ಉದ್ಯೋಗಿಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರದ ತಟ್ಟಾಚೇರಿಯಲ್ಲಿ ನಡೆದಿದೆ. ರಮ್ಯಾ (ಹೆಸರು) ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದವರು.
ಕೋಯಿಕ್ಕೋಡ್ ಜಿಲ್ಲೆಯ ಫರೋಕ್ ನಗರಸಭೆಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಜಿತ್ ಅವರ ಪತ್ನಿಯಾಗಿರುವ ರಮ್ಯಾ, ನೀಲೇಶ್ವರದ ಮನೆಯಲ್ಲಿ ಕಿರಿಯ ಮಗುವಿನೊಂದಿಗೆ ವಾಸವಾಗಿದ್ದರು. ಬೆಳಿಗ್ಗೆ ಮಗು ಟ್ಯೂಷನ್ಗೆ ತೆರಳಿದ್ದು, ತರಗತಿ ಮುಗಿಸಿ ಮನೆಗೆ ಮರಳಿದಾಗ ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು.
ಇದರಿಂದ ಆತಂಕಗೊಂಡ ಮಗು ಅಕ್ಕಪಕ್ಕದವರಿಗೆ ಮಾಹಿತಿ ನೀಡಿದೆ. ಸ್ಥಳೀಯರು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ರಮ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ನೀಲೇಶ್ವರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…