ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪತ್ನಿ ಹತ್ಯೆ ಪ್ರಕರಣ: ಪತಿಗೆ 5 ವರ್ಷ ಜೈಲು ಶಿಕ್ಷೆ

ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ನಿವಾಸಿ ಸಂಜೀವ ನಾಯ್ಕ್ ಶಿಕ್ಷೆಗೊಳಗಾದ ಆರೋಪಿ. 2024ರ ಡಿಸೆಂಬರ್ 11ರಂದು ಪತ್ನಿಯನ್ನು ಹತ್ಯೆಗೈದಿದ್ದ ಆತ, ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ನೆರೆಮನೆಯವರಿಗೆ ತಿಳಿಸಿ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಮೃತದೇಹದ ಮೇಲಿದ್ದ ಗಾಯಗಳನ್ನು ಗಮನಿಸಿದ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ನಡೆದ ಪೊಲೀಸ್ ವಿಚಾರಣೆಯಲ್ಲಿ ಆರೋಪಿ ತಪ್ಪೊಪ್ಪಿಕೊಂಡಿದ್ದನು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರಡಿ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು. ಅಲ್ಲದೆ, ಸಾಕ್ಷ್ಯ ನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಸೆಕ್ಷನ್ 240ರಡಿ 6 ತಿಂಗಳ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಮನೆಗಳಿಗೆ ಹಾನಿ; ಕೊಟ್ಟಿಗೆಗೆ ಬೆಂಕಿ

ಬೆಂಗಳೂರು: ಬೆಂಗಳೂರಿನ ರಾಜ್ಯೋತ್ಸವ ಸಾಧಕರ ಸಮಾಗಮಕ್ಕೆ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷ

ಅಬುಧಾಬಿ : ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’

ವಿಟ್ಲ: ಕತ್ತಿ ಬೀಸಿದ ಪರಿಣಾಮ ವ್ಯಕ್ತಿ ಸಾವು: 24 ವರ್ಷದ ಯುವತಿ ಬಂಧನ

ಮಂಗಳೂರು: ವಳಾಲು ಟೋಲ್ ಆರಂಭದ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಮುತ್ತಿಗೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ

ಕಾಸರಗೋಡು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಗರಸಭೆ ಉದ್ಯೋಗಿ ಪತ್ತೆ

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

error: Content is protected !!