ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಮೃತಪಟ್ಟ ವ್ಯಕ್ತಿ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ತೊಂದರೆ ನೀಡುತ್ತಿದ್ದ ಎನ್ನಲಾಗಿದ್ದು, ಈ ವೇಳೆ ರಿಶಿಕಾ ಕತ್ತಿ ಬೀಸಿದ್ದಾಳೆ ಎನ್ನಲಾಗಿದೆ. ಕತ್ತಿ ಎದೆಗೆ ತಾಗಿ ಗಂಭೀರವಾಗಿ ಗಾಯಗೊಂಡ ಚೆನ್ನಯ್ಯ ಅವರನ್ನು ಆಂಬುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ರಿಶಿಕಾಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಕುರಿತು ವಿಟ್ಲ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ ನಡೆಸುವ ಮೂಲಕ ತುರ್ತು ಪರಿಸ್ಥಿತಿಯನ್ನು ಎದುರಿಸುವ ಸನ್ನದ್ಧತೆಯನ್ನು ಪರಿಶೀಲಿಸಲಾಯಿತು.…