ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ನವೆಂಬರ್ 29ರಂದು ಅಬುಧಾಬಿಯ ಇಂಡಿಯನ್ ಎಂಬೆಸ್ಸಿ ಆಡಿಟೋರಿಯಂನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಗಣ್ಯ ಹೋಟೆಲ್ ಉದ್ಯಮಿ, ಸಮಾಜಸೇವಕ ಹಾಗೂ ಸಮುದಾಯದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಅವರು, ಯುಎಇಯ ದುಬೈ ಹಾಗೂ ಫುಜೈರಾದಲ್ಲಿ ಹೋಟೆಲ್ ಉದ್ಯಮದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಉದ್ಯಮದ ಯಶಸ್ಸಿನೊಂದಿಗೆ ಸಾಮಾಜಿಕ ಹೊಣೆಗಾರಿಕೆಗೂ ಆದ್ಯತೆ ನೀಡುತ್ತಾ, ಕರ್ನಾಟಕದ ಕುಂದಾಪುರ, ವಕ್ವಾಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಹಾಗೂ ಮಾನವೀಯ ಸೇವಾ ಕಾರ್ಯಗಳಿಗೆ ನೆರವು ನೀಡಿದ್ದಾರೆ.
ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ (ಕರ್ನಾಟಕ ಎನ್‌ಆರ್‌ಐ ಫೋರಂ), ಯುಎಇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ಕರ್ನಾಟಕ ಸಂಘ ಶಾರ್ಜಾದ ಪೋಷಕರು, ಕನ್ನಡ ಪಾಠಶಾಲೆ ದುಬೈಯ ಪೋಷಕರು ಹಾಗೂ ಯುಎಇ ಬಂಟ್ಸ್ ಸಂಘದ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕ ಸೇರಿದಂತೆ ಹಲವು ಸಂಘಟನೆಗಳೊಂದಿಗೆ ಕೈಜೋಡಿಸಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಒಗ್ಗಟ್ಟಿಗೆ ಶ್ರಮಿಸುತ್ತಿದ್ದಾರೆ.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಯುಎಇಯಲ್ಲಿ ಸಿಲುಕಿದ್ದ ಭಾರತೀಯರು, ವಿಶೇಷವಾಗಿ ಕರ್ನಾಟಕದವರಿಗೆ ತಾಯ್ನಾಡಿಗೆ ಮರಳಲು ಚಾರ್ಟರ್ ವಿಮಾನಗಳ ವ್ಯವಸ್ಥೆ ಮಾಡುವ ಮೂಲಕ ನೆರವಾಗಿದ್ದರು. ರಕ್ತದಾನ ಶಿಬಿರಗಳು, ಬಡ ಕುಟುಂಬಗಳಿಗೆ ನೆರವು, ವಿದ್ಯಾರ್ಥಿಗಳಿಗೆ ಸಹಾಯ ಹಾಗೂ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅವರ ಸೇವೆ ಮತ್ತು ಸಾಧನೆಗಳನ್ನು ಗುರುತಿಸಿ 2021ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ, ಮಯೂರ ಪ್ರಶಸ್ತಿ, ಕುವೆಂಪು ವಿಶ್ವಮಾನವ ಪ್ರಶಸ್ತಿ ಹಾಗೂ ಹಲವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳು ಸಂದಿವೆ. ಇದೀಗ ಅಬುಧಾಬಿ ಕರ್ನಾಟಕ ಸಂಘದ ದ. ರಾ. ಬೇಂದ್ರೆ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅವರ ಉದ್ಯಮಶೀಲತೆ, ಸಮಾಜಸೇವೆ ಹಾಗೂ ಕನ್ನಡಪರ ಕಾಳಜಿಗೆ ಸಂದ ಮತ್ತೊಂದು ಗೌರವವಾಗಿದೆ.
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ ನಡೆಸುವ ಮೂಲಕ ತುರ್ತು ಪರಿಸ್ಥಿತಿಯನ್ನು ಎದುರಿಸುವ ಸನ್ನದ್ಧತೆಯನ್ನು ಪರಿಶೀಲಿಸಲಾಯಿತು.…
ಕಾಸರಗೋಡು ನಗರಸಭೆಯ ಉದ್ಯೋಗಿಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರದ ತಟ್ಟಾಚೇರಿಯಲ್ಲಿ ನಡೆದಿದೆ. ರಮ್ಯಾ (ಹೆಸರು) ಮೃತಪಟ್ಟ…
ಪೊಲೀಸರ ಕರ್ತವ್ಯದಲ್ಲಿ ಒತ್ತಡ ಸಹಜವಾಗಿದ್ದು, ಅದನ್ನು ನಿವಾರಿಸಿಕೊಳ್ಳಲು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ. ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜತೆಗೆ…