ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ರೀಲ್ಸ್ ಮಾಡುವ ಸಲುವಾಗಿ ಸ್ಕೂಟಿಯನ್ನು ಯದ್ವಾತದ್ವಾ ಚಲಾಯಿಸಿದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಪರ್ಕಳ ನಿವಾಸಿ ಆಶಿಕ್ (19) ಎಂಬಾತ ಬಂಧಿತ ಯುವಕ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು ಅಪಾಯಕಾರಿಯಾಗಿ ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು. ರೀಲ್ಸ್ ವೈರಲ್ ಆದ ಬೆನ್ನಲ್ಲೆ ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಮಣಿಪಾಲ ಠಾಣಾ ಪೊಲೀಸರು ಸಿಸಿಟಿವಿ ಆಧಾರದಲ್ಲಿ ಆಶಿಕ್‌ನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



