ಮಂಗಳೂರು: ‘ಡ್ರಗ್ಸ್ ಮುಕ್ತ ಮಂಗಳೂರು’ ಅಭಿಯಾನದ ಅಂಗವಾಗಿ ಮಂಗಳೂರು ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಕಂಕನಾಡಿ – ಪಂಪ್ವೆಲ್ಲ್ ಪರಿಸರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂದಿಸಿದ್ದಾರೆ. ಮಂಗಳೂರು ನಗರದ ಕೋಡಿಕಲ್ ನಿವಾಸಿ ಮೊಹಮ್ಮದ್ ಅಝೀಝ್ ಯಾನೆ ಅಜೀಜ್ (40) ಬಂಧಿತ ಆರೋಪಿ.
50,000 ರೂಪಾಯಿ ಮೌಲ್ಯದ 2 ಕೆ. ಜಿ. ತೂಕದ ಗಾಂಜಾ, ಸುಝುಕಿ ಆ್ಯಕ್ಸಸ್ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ಸಹಿತ ಒಟ್ಟು ಒಂದು ಲಕ್ಷದ ಐದು ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಇನ್ನೂ ಈ ಗಾಂಜಾ ಮಾರಾಟ ಜಾಲದಲ್ಲಿ ಹಲವರು ಭಾಗಿಯಾಗಿದ್ದು, ಅವರ ಹುಡುಕಾಟ ಮುಂದುವರಿದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…