ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬಸ್ಥರ ಬಗ್ಗೆ ಅವಹೇಳನಕಾರಿ ಮಾತುಗಳು ಮತ್ತು ಅಪಪ್ರಚಾರಗಳನ್ನು ಖಂಡಿಸಿ ನಿನ್ನೆ ನಡೆದ ಬೃಹತ್ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಸೌಜನ್ಯ ಅವರ ತಾಯಿ ಹಾಗೂ ಕುಟುಂಬಸ್ಥರು ನ್ಯಾಯಕ್ಕೆ ಮೊರೆ ಹೋಗಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪಗೌಡ ಎಂಬವರ ಪತ್ನಿ ಕುಸುಮಾವತಿ (48) ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಳು. ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ಮೊರೆ ಹೋಗಿದ್ದರು. ಈ ಸಂದರ್ಭ ಅಪರಿಚಿತ ವ್ಯಕ್ತಿಗಳು, ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




